7

ಲಾರಿ ಮುಷ್ಕರ ಅಂತ್ಯ

Published:
Updated:

ಬೆಂಗಳೂರು: ಲಾರಿ ಮುಷ್ಕರವನ್ನು ಗುರುವಾರ ಸಂಜೆ ಅಂತ್ಯಗೊಳಿಸಲಾಗಿದೆ ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ತಿಳಿಸಿದ್ದಾರೆ.

ಇದೇ 27 ರ ಬಳಿಕ ಬೇಡಿಕೆ ಈಡೇರಿಕೆ ಬಗ್ಗೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿರುವುದರಿಂದ ತಾತ್ಕಾಲಿಕವಾಗಿ ಮುಷ್ಕರನಿಲ್ಲಿಸಿರುವುದಾಗಿ ತಿಳಿಸಿದ್ದಾರೆ.

ನಾಲ್ಕನೇ ದಿನ ನಡೆದ ಮುಷ್ಕರ

ಟ್ರಕ್‌ ಮಾಲೀಕರ ಮುಷ್ಕರ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಬೇಡಿಕೆಗಳು ಈಡೇರುವ ತನಕ ಮುಷ್ಕರ ಮುಂದುವರಿಯಲಿದೆ ಎಂದು ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ಹೇಳಿದ್ದರು. ಸಂಜೆ ವೇಳೆಗೆ ಮುಷ್ಕರ ಅಂತ್ಯಗೊಂಡಿತು.

ನಗರದ ಯಶವಂತಪುರದಲ್ಲಿರುವ ಟ್ರಕ್ ಟರ್ಮಿನಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಅವೈಜ್ಞಾನಿಕವಾಗಿ ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಮತ್ತು ಮೂರನೇ ಪಾರ್ಟಿ ವಿಮಾ ಪ್ರೀಮಿಯಂ ದರ ಏರಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರೋಧಿಸಿ ಮುಷ್ಕರ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ಮಾತನಾಡಿ,‘ನಮಗೆ ಡಿಸೇಲ್ ಹಾಗೂ ಪೆಟ್ರೋಲ್ ದರದ ಏರಿಕೆ ವಿಷಯ ಮುಖ್ಯವಾಗಿದೆ. ನಾವು ಯಾರಿಗೂ ಅನ್ಯಾಯ ಮಾಡುತ್ತಿಲ್ಲ. ಸರಕಾರ ಕರೆದು ಮಾತುಕತೆ ನಡೆಸುವವರೆಗೂ ಪರಿಸ್ಥಿತಿ ಇದೇ ರೀತಿ ಮುಂದುವರಿಯುತ್ತದೆ’ಎಂದು ಹೇಳಿದ್ದರು. ಮಾತುಕತೆ ಭರವಸೆ ಸಿಕ್ಕ ಬಳಿಕ ಮುಷ್ಕರ ಅಂತ್ಯಗೊಳಿಸಲಾಗಿದೆ.

 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !