ಗುರುವಾರ , ಡಿಸೆಂಬರ್ 3, 2020
20 °C

ಕೆಆರ್‌ಎಸ್ ನಾಲೆಗಳಿಗೆ ನೀರು ಹರಿಸಲು ಮುಖ್ಯಮಂತ್ರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರದಲ್ಲಿ ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು

ರಾಮನಗರ: ಮಂಡ್ಯ ಭಾಗದಲ್ಲಿ ಭತ್ತ ಹಾಗೂ ಕಬ್ಬು ಬೆಳೆಗಳ ಉಳಿವಿಗಾಗಿ ನಾಲೆಗಳಿಗೆ ಕೂಡಲೇ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ‌.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಪೇಟೆ ಕುರುಬರಹಳ್ಳಿಯಲ್ಲಿ ಗುರುವಾರ ಆಂಜನೇಯ ಸ್ವಾಮಿ ದೇಗುಲದ ಉದ್ಘಾಟನೆ ಸಂದರ್ಭ ಅವರು‌ ಪತ್ರಕರ್ತರ ಜೊತೆ ಮಾತನಾಡಿದರು. ಟ್ರಿಬ್ಯುನಲ್ ಆದೇಶದ ಪ್ರಕಾರ ಜೂನ್‌ನಲ್ಲಿ ತಮಿಳುನಾಡಿಗೆ ಎಷ್ಟು‌ ನೀರು ಬಿಡಬೇಕೋ ಅದನ್ನು ಈಗಾಗಲೇ ಹರಿಸಿದ್ದೇವೆ.

ಕಾಲುವೆಗೆ ನೀರು‌ ಬಿಡುಗಡೆಗಾಗಿ‌ ನಿರ್ವಹಣಾ ಮಂಡಳಿ ಆದೇಶಕ್ಕೆ ಕಾಯಲು ಆಗದು. ಏನೇ ಕಾನೂನು ತೊಡಕು ಬಂದರೂ ನಾನು ಎದುರಿಸುತ್ತೇನೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಡಿ.ಕೆ.ಶಿವಕುಮಾರ್ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿದ್ದಾರೆ. ಅವರ ರಾಜೀನಾಮೆಯ ಅಗತ್ಯ ಇಲ್ಲ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು