ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ

Last Updated 29 ಜನವರಿ 2018, 9:55 IST
ಅಕ್ಷರ ಗಾತ್ರ

ಹರಿಹರ: ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ ರಾಷ್ಟ್ರೀಯ ಪಕ್ಷಗಳ ಮುಖಂಡರು ದ್ವೇಷದ ರಾಜಕಾರಣದಿಂದ ಕಾಲಹರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನಗರದ ಎಸ್‌ಜೆವಿಪಿ ಪಾಲಿಟೆಕ್ನಿಕ್ ಆವರಣದಲ್ಲಿ ಎಚ್.ಶಿವಪ್ಪ ಅಭಿಮಾನಿಗಳ ಸಾಂಸ್ಕೃತಿಕ ಬಳಗದಿಂದ ಶನಿವಾರ ನಡೆದ ಸರ್ವಧರ್ಮ ಸಮ್ಮಿಲನ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೂರು ವರ್ಷಗಳಿಂದ ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಮೂರೂವರೆ ಸಾವಿರಕ್ಕೂ ಹೆಚ್ಚು ರೈತರು ಅತ್ಯಹತ್ಯೆಗೆ ಶರಣಾಗಿದ್ದಾರೆ. ರೈತ ಸಂಕುಲ ಸಂಕಷ್ಟಕ್ಕೆ ಸಿಲುಕಿದೆ. ಇವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ರಾಷ್ಟ್ರಿಯ ಪಕ್ಷಗಳು ಕೆಸರೆರಚಾಟದಲ್ಲಿ ತೊಡಗಿವೆ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಕೂಡಲೇ ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇವೆ. ಕೃಷಿಗೆ ನಿರಂತರ ವಿದ್ಯುತ್ ವ್ಯವಸ್ಥೆ ನೀಡುತ್ತೇವೆ. ಗ್ರಾಮೀಣ ಪ್ರದೇಶ್ ನಿರುದ್ಯೋಗಿಗಳಿಗೆ ಕೃಷಿ ಆಧಾರಿತ ಉದ್ಯೋಗಾವಕಾಶಗಳನ್ನು ಸೃಷ್ಟಿಸು ತ್ತೇವೆ’ ಎಂದು ಭರವಸೆ ನೀಡಿದರು.

ತಾಲ್ಲೂಕಿನಲ್ಲಿ ಗುಣಮಟ್ಟದ, ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜತೆಗೆ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕ ಶಿವಶಂಕರ್ ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಮತದಾರರು ಅವರಿಗೆ ಮತ್ತೊಂದು ಅವಕಾಶ ನೀಡಬೇಕು. ಮುಂದೆ ಅವರಿಗೆ ಸಚಿವ ಸ್ಥಾನ ನೀಡುತ್ತೇನೆ ಎಂದು ವಾಗ್ದಾನ ಮಾಡಿದರು.

ಸಾನ್ನಿಧ್ಯ ವಹಿಸಿದ್ದ ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ‘ಜೊಳ್ಳು ಹಾಗೂ ಟೊಳ್ಳುತನ ಕಳಚಿದರೆ ಮಾತ್ರ ಗಟ್ಟಿತನ ಹಾಗೂ ಯಶಸ್ಸು ಪ್ರಾಪ್ತವಾಗುತ್ತದೆ. ಮಂತ್ರ-ತಂತ್ರಗಳಿಂದ ಯಾವುದೇ ವಿಸ್ಮಯ ಸೃಷ್ಟಿಸಲು ಸಾಧ್ಯವಿಲ್ಲ. ಜೀವನ ರೂಪಿಸಿಕೊಳ್ಳಲು ಅಂಧ ಶ್ರದ್ಧೆ, ಮೌಢ್ಯ ಹಾಗೂ ಜ್ಯೋತಿಷಿಗಳ ಸಹಕಾರದ ಅಗತ್ಯವಿಲ್ಲ ಎಂದು ಕಿವಿಮಾತು ಹೇಳಿದರು.

‘ಸಮಸ್ಯೆಗಳ ಪರಿಹಾರಕ್ಕಾಗಿ ಮಂತ್ರವಾದಿ ಹಾಗೂ ಜ್ಯೋತಿಷಿಗಳ ಬಳಿಗೆ ಧಾವಿಸದೇ ಪ್ರಾಮಾಣಿಕ ದುಡಿಮೆಗೆ ಮೊರೆಹೋಗಬೇಕು. ಮೌಢ್ಯ ಹಾಗೂ ಜೊಳ್ಳುತನ ಜೀವನದ ನಾಶಕ್ಕೆ ಕಾರಣವಾಗುತ್ತವೆ. ಇವುಗಳಿಂದ ದೂರವಿರಿ’ ಎಂದು ಎಚ್ಚರಿಕೆ ನೀಡಿದರು.

ಶಾಸಕ ಎಚ್.ಎಸ್.ಶಿವಶಂಕರ್ ಮಾತನಾಡಿ, ‘ತಂದೆಯವರು ಹಾಕಿಕೊಟ್ಟ ದಾರಿಯಲ್ಲೇ ಸ್ವಾರ್ಥ ರಹಿತವಾಗಿ ಹಿಂದುಳಿದ ಹಾಗೂ ಬಡ ವರ್ಗದವರಿಗೆ ಉಚಿತ ಸಾಮೂಜಿಕ ವಿವಾಹದ ವ್ಯವಸ್ಥೆ ಮಾಡುತ್ತಿದ್ದೇವೆ. ಮಾತಿಗಿಂತ ಕೃತಿ ಲೇಸು ಎಂಬಂತೆ, ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಗಳು ಮಾತನಾಡುವಂತಾಗಬೇಕು’ ಎಂದರು.

ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದ್ದ, ವಧು-ವರರನ್ನು ನಗರದ ಮಾಜೇನಹಳ್ಳಿ ಗ್ರಾಮದೇವತೆ ದೇವಸ್ಥಾನದಿಂದ ವೇದಿಕೆ ಸ್ಥಳದವರೆಗೆ ಕುಂಭ ಹಾಗೂ ಮಂಗಳವಾದ್ಯಗಳ ಮೆರವಣಿಗೆ ಮೂಲಕ ಕರೆ ತರಲಾಯಿತು. ಸಾಮೂಜಿಕ ವಿವಾಹದಲ್ಲಿ 47 ದಂಪತಿಗಳು ಸಾಂಸಾರಿಕ ಜೀವನಕ್ಕೆ ಕಾಲಿಟ್ಟರು.

ಸಿದ್ಧದಲಿಂಗ ಸ್ವಾಮೀಜಿ, ಪ್ರಭುಲಿಂಗ ಸ್ವಾಮೀಜಿ, ಚನ್ನಬಸವ ಶಿವಯೋಗಿ, ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಅನ್ನದಾನಿ ಭಾರತಿ ಬಸವಪ್ರಿಯ ಅಣ್ಣಪ್ಪ ಸ್ವಾಮೀಜಿ, ಷಡಕ್ಷರಿಮುನಿ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಅಲ್‌ಹಜ್ ಸೈಯದ್ ಷಂಶುದ್ದೀನ್ ಭರ್ಕಾತಿ, ರೆಫಾ ಡಾ.ಅಂಥೋನಿ ಪೀಟರ್ ಸಾನಿಧ್ಯ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT