ಪ್ರತ್ಯೇಕ ಲಿಂಗಾಯತ ಧರ್ಮ: ಶಿಫಾರಸು ಪರಿಶೀಲನೆಯಲ್ಲಿದೆ– ಕೇಂದ್ರ

7
ಮಾನ್ಯತೆ ತಕರಾರು ಪ್ರಕರಣ

ಪ್ರತ್ಯೇಕ ಲಿಂಗಾಯತ ಧರ್ಮ: ಶಿಫಾರಸು ಪರಿಶೀಲನೆಯಲ್ಲಿದೆ– ಕೇಂದ್ರ

Published:
Updated:

ಬೆಂಗಳೂರು: ‘ಲಿಂಗಾಯತ, ವೀರಶೈವ ಲಿಂಗಾಯತರಿಗೆ (ಬಸವತತ್ವ ಅನುಸರಿಸುವವರು) ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಬಂಧ ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸು ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಸಂಬಂಧ ಶಶಿಧರ ಶಾನುಭೋಗ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ‌.ನಾವದಗಿ ಅವರು, ‘ಲಿಂಗಾಯತ ಧರ್ಮದ ಪ್ರತ್ಯೇಕ ಮಾನ್ಯತೆಗೆ ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸು ಕುರಿತಂತೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಇತರ ಇಲಾಖೆಗಳಿಂದ ಮಾಹಿತಿ ಕೋರಲಾಗಿದೆ. ಕಡತ ಸದ್ಯ ಕೇಂದ್ರ ಸರ್ಕಾರದ ಮುಂದಿದೆ’ ಎಂದು ತಿಳಿಸಿದರು.

ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !