ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳದಿಂದ ರಾಷ್ಟ್ರಮಟ್ಟದ ‘ಯೋಗ ರತ್ನ’ ಪ್ರಶಸ್ತಿ

Last Updated 21 ಜೂನ್ 2018, 18:00 IST
ಅಕ್ಷರ ಗಾತ್ರ

ಉಜಿರೆ: ಮುಂದಿನ ವರ್ಷದ ವಿಶ್ವ ಯೋಗ ದಿನಾಚರಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಉನ್ನತ ಸಾಧನೆ ಮಾಡುವ ಯೋಗಪಟುಗಳಿಗೆ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ.

ಗುರುವಾರ ಧರ್ಮಸ್ಥಳದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಈ ವಿಷಯ ತಿಳಿಸಿದರು.

ಸೂತ್ರ ನೇತಿ ವಿಶ್ವ ದಾಖಲೆ: ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಧಮಸ್ಥಳದ ವಿಶ್ವಯೋಗ ದಿನಾಚರಣೆ ಸಂದರ್ಭ ಪ್ರದರ್ಶಿಸಿದ ಸೂತ್ರ ನೇತಿ ಕ್ರಿಯೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಲಿದೆ.

‘ ಸೂತ್ರ ನೇತಿ ಒಟ್ಟು 5 ನಿಮಿಷದ ಪ್ರಕ್ರಿಯೆಯಾಗಿದ್ದು 1ನಿಮಿಷದಲ್ಲಿ ಏಕ ಕಾಲದಲ್ಲಿ 368 ವಿದ್ಯಾರ್ಥಿಗಳು ಮೂಗಿನ ದ್ವಾರದ ಮೂಲಕ ರಬ್ಬರ್ ದಾರವನ್ನು ಹಾಕಿ ಬಾಯಿ ಮೂಲಕ ಹೊರ ತೆಗೆದಿದ್ದಾರೆ. ಇದನ್ನು ನಾಲ್ಕು ಕೋನಗಳಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಚಿತ್ರೀಕರಿಸಿದ ವಿಡಿಯೊವನ್ನು ಕ್ಯಾಲಿಫೊರ್ನಿಯಾದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್‌ ಸಂಸ್ಥೆಗೆ ಕಳುಹಿಸಿ ಕೊಡಲಾಗುವುದು. ಇಂತಹ ಸಾಧನೆ ಇದೇ ಪ್ರಥಮ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT