ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

Last Updated 19 ಜೂನ್ 2018, 19:29 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗಾಗಿಕಳೆದ ವರ್ಷ ನವೆಂಬರ್‌ನಲ್ಲಿ ನಡೆಸಿದ್ದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಮಂಗಳವಾರ ಪ್ರಕಟಿಸಿದರು.

‘ಅನೇಕರು ವಿವಿಧ ಹುದ್ದೆಗಳಲ್ಲಿ ತೊಡಗಿಕೊಂಡಿರುವ ಸಂಭವವಿರುತ್ತದೆ. ಹೀಗಾಗಿ, ಒಂದು ಹುದ್ದೆಗೆ ಇಬ್ಬರು ಶಿಕ್ಷಕರು ಎನ್ನುವ ಅನುಪಾತದಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಜೊತೆಗೆ ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಅಭಿಪ್ರಾಯ ಪಡೆದು, ಮಾರ್ಪಡಿಸಿ ಪ್ರಕಟಿಸಲಾಗಿದೆ’ ಎಂದು ಹೇಳಿದರು.

‘ಡಿಡಿಪಿಐಗಳು ಪರಿಶೀಲಿಸಿ ವರದಿ ನೀಡಿದ ನಂತರ, ಅಂಕಗಳ ಆಧಾರ ಮೇಲೆ ಒಂದು ಹುದ್ದೆಗೆ ಒಬ್ಬ ಶಿಕ್ಷಕ ಎಂಬ ಅನುಪಾತದಲ್ಲಿ ಅಂತಿಮ ಫಲಿತಾಂಶವನ್ನು ಜುಲೈ 29ಕ್ಕೆ ಪ್ರಕಟಿಸಲಾಗುವುದು.ಆಗಸ್ಟ್ 5ರಿಂದ ಅವರಿಗೆ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅಂತಿಮ ಪಟ್ಟಿ ಪ್ರಕಟಗೊಂಡ ಒಂದು ತಿಂಗಳ ಒಳಗೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತೇವೆ’ ಎಂದು ಸಚಿವರು ವಿವರಿಸಿದರು.

‘ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಒಟ್ಟು 25,600 ಹುದ್ದೆಗಳಿಗೂ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಕೋರಿದ್ದೇವೆ. ಸದ್ಯ 22,500 ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡಲಾಗಿದೆ. ಹಿರಿಯ ಪ್ರಾಥಮಿಕ ಶಾಲೆಗೆ ನೇಮಕಗೊಂಡ 10 ಸಾವಿರ ಶಿಕ್ಷಕರುಕರ್ತವ್ಯಕ್ಕೆ ಹಾಜರಾದ ತಕ್ಷಣ ಅತಿಥಿ ಶಿಕ್ಷಕರ ನೇಮಕಾತಿ ರದ್ದಾಗಲಿದೆ’ ಎಂದೂ ಮಾಹಿತಿ ನೀಡಿದರು.

ಬಸ್‌ಪಾಸ್‌: ಇನ್ನೊಂದು ದಿನದಲ್ಲಿ ನಿರ್ಧಾರ

‘ನನ್ನ ಪ್ರಕಾರ ಎಲ್ಲಾ ಮಕ್ಕಳಿಗೂ ಉಚಿತ ಬಸ್‌ ಪಾಸ್‌ ನೀಡಬೇಕು. ಎಲ್ಲರಿಗೂ ಪಾಸ್‌ ನೀಡುವುದರಿಂದ ಸಾರಿಗೆ ಇಲಾಖೆಗೆ ಹೊರೆಯಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಆರ್ಥಿಕ ಹೊರೆಯನ್ನು ಯಾರು ಹೊರಬೇಕು ಎನ್ನುವುದನ್ನು ಅವರೊಂದಿಗೆ ಚರ್ಚಿಸಿ, ಇನ್ನೊಂದು ದಿನದಲ್ಲಿ ಕ್ರಮಕೈಗೊಳ್ಳುತ್ತೇನೆ’ ಎಂದು ಸಚಿವ ಎನ್‌.ಮಹೇಶ್‌ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT