7
ರಾಜ್ಯದಾದ್ಯಂತ ಸಾಮೂಹಿಕ ಯೋಗ

ಮಾಜಿ ಪ್ರಧಾನಿಯ 'ಹಠಯೋಗ'

Published:
Updated:

ಬೆಂಗಳೂರು: ಸೂರ್ಯ ರಶ್ಮಿ ನೆಲ ಮುಟ್ಟುವ ಮುನ್ನವೇ ರಾಜ್ಯದ ಬಹುತೇಕ ಕಡೆ ಸಾಮೂಹಿಕ ಯೋಗ ಪ್ರದರ್ಶನಕ್ಕೆ ಸಜ್ಜಾಗಿದ್ದ ಜನರು ಆಸನಗಳನ್ನು ಪ್ರದರ್ಶಿಸಿದರು.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಬಿಜೆಪಿ ಮುಖಂಡ ಯಡಿಯೂರಪ್ಪ ಸೇರಿ ಅನೇಕ ಹಿರಿಯ ರಾಜಕೀಯ ಮುಖಂಡರು ಯೋಗ ಅಭ್ಯಾಸ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾದರು. 

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರೇಸ್ ಕೋರ್ಸ್‌ನಲ್ಲಿ ಸಾಮೂಹಿಕ ಯೋಗ ಪ್ರದರ್ಶನ. 15 ಸಾವಿರಕ್ಕೂ ಅಧಿಕ ಜನ ಭಾಗಿ.


ಹುಬ್ಬಳ್ಳಿ: ವಿಶ್ವ ಯೋಗ ದಿನದ ಅಂಗವಾಗಿ ಕ್ಷಮತಾ ಯೋಗ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಯೋಗ ಪ್ರದರ್ಶಿಸಿದರು. ಸಂಸದ ಪ್ರಹ್ಲಾದ ಜೋಶಿ ಭಾಗಿಯಾದರು.

ಶಿರಸಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಸಾಮೂಹಿಕ ಯೋಗ ಪ್ರದರ್ಶ‌ನ ನಡೆಯಿತು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಿದರು.


ಬಳ್ಳಾರಿ: ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯುಷ್ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಯೋಗ ದಿನಾಚರಣೆ. ಜಿಲ್ಲಾಧಿಕಾರಿ ರಾಮ್ ಪ್ರಸಾದ್ ಮನೋಹರ, ಜಿಪಂ ಸಿಇಓ ಡಾ.ರಾಜೇಂದ್ರ, ಅಧ್ಯಕ್ಷೆ ಸಿ.ಭಾರತಿ, ಉಪಾಧ್ಯಕ್ಷೆ ಪಿ.ದೀನಾ, ಎಸ್ಪಿ ಅರುಣ್ ರಂಗರಾಜನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಭಾಗಿಯಾದರು. ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಾಧಕರ ನೇತೃತ್ವದಲ್ಲಿ ಯೋಗಾಸನ ಅಭ್ಯಾಸ ಮಾಡಿದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು.


ರಾಯಚೂರು: ನವೋದಯ ಶಿಕ್ಷಣ ಸಂಸ್ಥೆಯಿಂದ‌ ನವೋದಯ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗಾಸನ ಮಾಡಿದರು.

ತುಮಕೂರು: ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ತುಮಕೂರಿನ ಸಿದ್ಧಗಂಗಾಮಠದ ಆವರಣದಲ್ಲಿ ಕಾರ್ಯಕ್ರಮ. ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನೂರಾರು ಜನರು ಯೋಗಾಸನ ಮಾಡಿದರು.

ಚಿತ್ರದುರ್ಗ: ಮಾಧ್ಯಮಿಕ ಶಾಲೆ ಆವರಣದಲ್ಲಿ ಯೋಗ ಪ್ರದರ್ಶನ. ನೂರಾರು ಯೋಗ ಪಟುಗಳು ಪಾಲ್ಗೊಂಡರು.

ಚಿಕ್ಕಬಳ್ಳಾಪುರ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ದೀಪ್ತಿ ಕಾನಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್‌.ಅನುರಾಧಾ, ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್ ಹೆಗಡೆ, ಎಸ್ಪಿ ಕಾರ್ತಿಕ್ ರೆಡ್ಡಿ ಸೇರಿದಂತೆ ಸರ್ಕಾರಿ ಅಧಿಕಾರಿಗಳು, ವಿದ್ಯಾರ್ಥಿಗಳು, ನಾಗರಿಕರು ಯೋಗಾಭ್ಯಾಸ ಮಾಡಿದರು.

ಉಡುಪಿ: ಇಲ್ಲಿನ ಅಜ್ಜರಕಾಡು ಒಳಾಂಗಣದಲ್ಲಿ ಕ್ರೀಡಾಂಗಣದಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಕೂಡ ಯೋಗಪಟುಗಳೊಂದಿಗೆ ಯೋಗ ಮಾಡಿ ಗಮನ ಸೆಳೆದರು. ಜಿಲ್ಲಾ ಪಂಚಾಯ್ತಿ ಸಿಇಒ ಶಿವಾನಂದ ಕಾಪಶಿ, ನಗರಸಭೆ ಆಯುಕ್ತ ಜನಾರ್ಧನ್, ನಿರಾಲಂಬ ಪೂರ್ಣ ಚಕ್ರಾಸನದಲ್ಲಿ ಗಿನ್ನಿಸ್ ದಾಖಲೆ ಮಾಡಿರುವ ತನುಶ್ರೀ ಕೂಡ ಯೋಗ ಮಾಡಿದರು. ವಿವಿಧ ಶಾಲೆಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.‌

ಬೆಳಗಾವಿ: ಜಿಲ್ಲಾಡಳಿತದಿಂದ ಇಲ್ಲಿನ ಗಾಂಧಿ ಭವನದಲ್ಲಿ ಯೋಗ ದಿನಾಚರಣೆ. ಸಂಸದ ಸುರೇಶ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಜಿಲ್ಲಾ ಪಂಚಾಯ್ತಿ ಸಿಇಒ ಆರ್. ರಾಮಚಂದ್ರನ್, ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರಿಂದ ಯೋಗ.

ಬೆಂಗಳೂರು: ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್‌ ಸೇವೆಗಳ ಇಲಾಖೆ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ  4ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿಯಾದರು. 

ಬರಹ ಇಷ್ಟವಾಯಿತೆ?

 • 63

  Happy
 • 2

  Amused
 • 3

  Sad
 • 1

  Frustrated
 • 4

  Angry

Comments:

0 comments

Write the first review for this !