ಶನಿವಾರ, ಸೆಪ್ಟೆಂಬರ್ 18, 2021
21 °C
ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಯೋಗ ಶಾಲೆ ಭರವಸೆ

ಪ್ರಧಾನಿ ನಿದ್ರೆ ಕೇವಲ 3 ತಾಸು, ಇದು ಯೋಗದ ಮಹಿಮೆ: ರೂಪಾಲಿ ನಾಯ್ಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಗರದ ಬಾಡದ ಗುರುಮಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಸಮಿತಿ, ರೋಟರಿ ಕಾರವಾರ ಸೀಸೈಡ್ ಘಟಕ ಹಾಗೂ ಆಯುಷ್ ಇಲಾಖೆ ವತಿಯಿಂದ ಯೋಗಾಭ್ಯಾಸ ಹಮ್ಮಿಕೊಳ್ಳಲಾಯಿತು.

ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಯೋಗ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ದಿನದ 21 ತಾಸು ಜನರಿಗಾಗಿ ಕೆಲಸ ಮಾಡುತ್ತಾರೆ. ಅವರು ಕೇವಲ 3 ತಾಸು ನಿದ್ರೆ ಮಾಡುತ್ತಾರೆ. ಇದು ಅವರಿಗೆ ಸಾಧ್ಯವಾಗಿದ್ದು ಯೋಗದಿಂದ ಎಂದರು.

ಯೋಗ ದಿನವೆಂದು ಒಂದು ದಿನ ಯೋಗ ಮಾಡಿಬಿಟ್ಟರೆ ಪ್ರಯೋಜನವಿಲ್ಲ. ಶರೀರ ಹಾಗೂ ಆತ್ಮವನ್ನು ಮೊದಲು ಸ್ವಚ್ಛವಾಗಿಟ್ಟುಕೊಂಡು ನಂತರ ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಮಾಡುವ ಕೆಲಸಗಳು ಪರಿಶುದ್ಧವಾಗಿರಬೇಕು. ಸ್ವಾರ್ಥಿಗಳಾಗದೆ, ಕಲಿಸಿದ ಗುರುಗಳು ಹಾಗೂ ಹೆತ್ತ ತಂದೆ- ತಾಯಿಗಳನ್ನು ಮರೆಯಬಾರದು ಎಂದರು.

ಕಾರವಾರ- ಅಂಕೋಲಾ ಕ್ಷೇತ್ರದಲ್ಲಿ ಯೋಗ ಶಾಲೆಯೊಂದನ್ನು ಪ್ರಾರಂಭಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ವಿದ್ಯಾರ್ಥಿಗಳು, ಅಧಿಕಾರಿಗಳು, ಎನ್ಎಸ್ಎಸ್ ಶಿಬಿರಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು ಮುನ್ನೂರಕ್ಕೂ ಅಧಿಕ ಮಂದಿ ಡಾ.ಪ್ರಕಾಶ್ ಅವರ ನೇತೃತ್ವದಲ್ಲಿ ಏಕಕಾಲದಲ್ಲಿ ಯೋಗಾಭ್ಯಾಸ ಮಾಡಿದರು. ಶಾಸಕಿ ರೂಪಾಲಿ ನಾಯ್ಕ ಕೂಡ ಸಾರ್ವಜನಿಕರೊಂದಿಗೆ ಯೋಗಾಭ್ಯಾಸ ಮಾಡಿದರು.

ಸರ್ಕಾರಿ ಆಯುರ್ವೇದಿಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಗದೀಶ ಯಾಜಿ, ಉಪವಿಭಾಗಾಧಿಕಾರಿ ಅಭಿಜಿನ್ ಬಿ., ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಸಿ.ಆರ್.ಬಸವರಾಜಯ್ಯ, ಶಿಕ್ಷಣ ಇಲಾಖೆಯ ಪ್ರವೀಣ, ಪತಂಜಲಿ ಯೋಗ ಪೀಠದ ಯಮುನಾ, ಮೋಹನ್ ಅಣ್ವೇಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು