ಆಂಧ್ರಪ್ರದೇಶ: ವಿಧಾನಸಭೆ-ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧ

ಗುರುವಾರ , ಏಪ್ರಿಲ್ 25, 2019
33 °C
ಲೋಕಸಭೆ ಚುನಾವಣೆ

ಆಂಧ್ರಪ್ರದೇಶ: ವಿಧಾನಸಭೆ-ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧ

Published:
Updated:

ನವದೆಹಲಿ: ಆಂಧ್ರಪ್ರದೇಶ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಕೇರಳದ ಮಾಜಿ ಮುಖ್ಯಮಂತ್ರಿ ಮಾಜಿ ಮುಖ್ಯಮಂತ್ರಿ ಒಮನ್‌ ಚಾಂಡಿ ಹೇಳಿದ್ದಾರೆ.

‘ಲೋಕಸಭೆಯ 22 ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಾಗಲೇ ನಿರ್ಧರಿಸಲಾಗಿತ್ತು. ಇನ್ನುಳಿದ ಮೂರು ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳನ್ನೂ ಅಂತಿಮಗೊಳಿಸಲಾಗಿದೆ. ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರಾದ ಮುಕುಲ್‌ ವಾಸ್ನಿಕ್‌, ಎ.ಕೆ. ಆಂಟೋನಿ, ಕೆ.ಸಿ. ವೇಣುಗೋಪಾಲ್‌, ಅಹ್ಮದ್‌ ಪಟೇಲ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭೆ ಸ್ಥಾನಗಳಿದ್ದು, 22 ಕ್ಷೇತ್ರಗಳ ಅಭ್ಯರ್ಥಿಗಳನ್ನು ಕೆಲದಿನಗಳ ಹಿಂದೆ ಪ್ರಕಟಿಸಲಾಗಿತ್ತು. ಉಳಿದ ಮೂರು ಲೋಕಸಭೆ ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಇಂದು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ರಾಜ್ಯದಲ್ಲಿ ಲೋಕ ಮತ್ತು ವಿಧಾನಸಭೆಗೆ ಏಪ್ರಿಲ್‌ 11ರಂದು ಮತದಾನ ನಡೆಯಲಿದೆ.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 1

    Sad
  • 0

    Frustrated
  • 1

    Angry

Comments:

0 comments

Write the first review for this !