ಯಾರ ಬೆಂಬಲವೂ ಮುಖ್ಯವಲ್ಲ, ಫಲಿತಾಂಶ ನಿರ್ಧಾರವಾಗಿದೆ: ತೇಜಸ್ವಿ ಸೂರ್ಯ

ಬುಧವಾರ, ಏಪ್ರಿಲ್ 24, 2019
27 °C
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಿಂದ ಹೇಳಿಕೆ

ಯಾರ ಬೆಂಬಲವೂ ಮುಖ್ಯವಲ್ಲ, ಫಲಿತಾಂಶ ನಿರ್ಧಾರವಾಗಿದೆ: ತೇಜಸ್ವಿ ಸೂರ್ಯ

Published:
Updated:

ಬೆಂಗಳೂರು: ‘ಯಾರು ಬೆಂಬಲ ನೀಡಲಿ, ಬಿಡಲಿ ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ’ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾತನಾಡಿರುವ ವಿಡಿಯೊ ಕ್ಲಿಪ್ಪಿಂಗ್ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದೆ.

ಇದನ್ನೂ ಓದಿ: ಅಭ್ಯರ್ಥಿಯ ಹೆಸರು ಹೇಳದೆಯೇ ಮತ ಯಾಚಿಸಿದ ಸತೀಶ್‌ ರೆಡ್ಡಿ​

‘ಮುಂದಿನ ದಿನಗಳಲ್ಲಿ ಯಾರು, ಎಲ್ಲಿಂದ ಬೆಂಬಲ ನೀಡುತ್ತಾರೆ, ಯಾರು ನೀಡುವುದಿಲ್ಲ ಎಂಬುದು ಮುಖ್ಯವಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿಯೇ ಮತ ಚಲಾಯಿಸುವುದು ಎಂದು ಜನ ನಿರ್ಧರಿಸಿದ್ದಾರೆ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ. ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡಬೇಕಾಗಿರುವುದಷ್ಟೇ ನಾವೀಗ ಮಾಡಬೇಕಿರುವ ಕೆಲಸ’ ಎಂದು ಸೂರ್ಯ ಹೇಳಿದ್ದಾರೆ.

ಇದನ್ನೂ ಓದಿ: ತೇಜಸ್ವಿನಿ ಅನಂತಕುಮಾರ್‌ಗೆ ಟಿಕೆಟ್ ಮಿಸ್, ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಸ್ಪರ್ಧೆ​

ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ಕೊನೇ ಕ್ಷಣದಲ್ಲಿ ಟಿಕೆಟ್ ತಪ್ಪಿಸಿ ತೇಜಸ್ವಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ರಾಜ್ಯ ನಾಯಕರು ಈಗಾಗಲೇ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ, ಚುನಾವಣಾ ಪ್ರಚಾರದಲ್ಲೂ ಸರಿಯಾಗಿ ಭಾಗವಹಿಸುತ್ತಿಲ್ಲ. ಪ್ರಚಾರದಲ್ಲಿ ಭಾಗವಹಿಸುವ ಬಗ್ಗೆ ತೇಜಸ್ವಿನಿ ಅವರೂ ಇನ್ನೂ ಏನೂ ಹೇಳಿಲ್ಲ.

ಇದನ್ನೂ ಓದಿ: ತೇಜಸ್ವಿ ಬೆಂಬಲಿಸುವ ಮೊದಲು ನನ್ನ ಕಥೆ ಓದಿ: ಮಹಿಳಾ ಉದ್ಯಮಿ ಸೋಮ್‌ ದತ್ತಾ ಮನವಿ​

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ಪ್ರಚಾರ ನಡೆಸಿದ್ದ ಬೊಮ್ಮನಹಳ್ಳಿಯ ಶಾಸಕ ಸತೀಶ್‌ ರೆಡ್ಡಿ ಅಭ್ಯರ್ಥಿಯ ಹೆಸರು ಹೇಳದೆಯೇ ಮತ ಯಾಚಿಸಿದ್ದರು. ‘ಈ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ನಗಣ್ಯ. ಮೋದಿ ಮತ್ತು ಯಡಿಯೂರಪ್ಪ ಅವರೇ ನಮ್ಮ ಅಭ್ಯರ್ಥಿ. ಅವರೇ ನಮ್ಮ ಜೋಡೆತ್ತುಗಳು ಎಂದು ಭಾವಿಸಿ ಕೆಲಸ ಮಾಡೋಣ’ ಎಂದು ರೆಡ್ಡಿ ಹೇಳಿದ್ದರು.

ಇನ್ನಷ್ಟು...

ಬೆಂಗಳೂರು ದಕ್ಷಿಣ: ಅಚ್ಚರಿ ಆಯ್ಕೆ ಹಿಂದಿನ ಲೆಕ್ಕಾಚಾರ​

ಅತೃಪ್ತಿ ಶಮನಕ್ಕೆ ಬಿಎಸ್‌ವೈ ಯತ್ನ​

* ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 2

  Sad
 • 0

  Frustrated
 • 23

  Angry

Comments:

0 comments

Write the first review for this !