ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ

Last Updated 25 ಮಾರ್ಚ್ 2019, 10:21 IST
ಅಕ್ಷರ ಗಾತ್ರ

ಚಿತ್ರದುರ್ಗ: ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಮಧ್ಯಾಹ್ನ 2ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಪತ್ರಗಳಿಗೆ ಸಹಿ ಮಾಡಿ ನೀಡಿದರು.

ಅಭ್ಯರ್ಥಿಯೊಂದಿಗೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಹಾಗೂ ಬಿಜೆಪಿ ಮುಖಂಡ ಶ್ರೀನಿವಾಸ್ ಇದ್ದರು.

ಬಿಜೆಪಿ ಕಚೇರಿಯಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಅವರು ಉಮೇದುವಾರಿಕೆ ಸಲ್ಲಿಸಿದರು.ಮಂಗಳವಾರ ಮೆರವಣಿಗೆಯಲ್ಲಿ ಧಾವಿಸಿ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT