ಹಾಸನ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಬುಧವಾರ, ಏಪ್ರಿಲ್ 24, 2019
32 °C
ಲೋಕಸಭಾ ಚುನಾವಣೆ 2019

ಹಾಸನ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

Published:
Updated:

ಹಾಸನ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಸನ ಕ್ಷೇತ್ರದಿಂದ ಜೆಡಿಎಸ್‌ –ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ನಾಮಪತ್ರ ಸಲ್ಲಿಸಿದರು. 

ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಬಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್‌ಗೆ ಸಾಥ್‌ ನೀಡಿದರು.

ಇದಕ್ಕೂ ಮುನ್ನ ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನ, ಹರದನಹಳ್ಳಿ ಈಶ್ವರ, ಮಾವಿನಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವರ ಬಳಿ ನಾಮಪತ್ರ ಇಟ್ಟು ಪೂಜೆ ಸಲ್ಲಿಸಲಾಯಿತು.

ಬಳಿಕ ಪ್ರಜ್ವಲ್, ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಎನ್. ಆರ್. ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಮೆರವಣಿಗೆನ ನಡೆಸಿದರು.

ಮೆರವಣಿಗೆಯಲ್ಲಿ ಪ್ರಜ್ವಲ್ ತಂದೆ ಸಚಿವ ಎಚ್.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ, ಶಾಸಕರಾದ ಲಿಂಗೇಶ್, ಎ‌.ಟಿ.ರಾಮಸ್ವಾಮಿ, ಸಿ.ಎನ್‌‌.ಬಾಲಕೃಷ್ಣ,ಕೆ.ಎಂ.ಶಿವಲಿಂಗೇಗೌಡ, ಎಚ್.ಕೆ.ಕುಮಾರಸ್ವಾಮಿ, ಉಪಸಭಾಪತಿ ಧರ್ಮೇಗೌಡ, ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಜರಿದ್ದರು. 

ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಬಿಎಂ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 1

  Sad
 • 1

  Frustrated
 • 0

  Angry

Comments:

0 comments

Write the first review for this !