ದಾವಣಗೆರೆ: ಬಿಜೆಪಿಯಿಂದ ಸಂಸದ ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

ಭಾನುವಾರ, ಏಪ್ರಿಲ್ 21, 2019
32 °C

ದಾವಣಗೆರೆ: ಬಿಜೆಪಿಯಿಂದ ಸಂಸದ ಸಿದ್ದೇಶ್ವರ ನಾಮಪತ್ರ ಸಲ್ಲಿಕೆ

Published:
Updated:

ದಾವಣಗೆರೆ: ಸತತವಾಗಿ ಮೂರು ಬಾರಿ ಸಂಸದರಾಗಿರುವ ಜಿ.ಎಂ. ಸಿದ್ದೇಶ್ವರ ಅವರು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್. ಶಿವಮೂರ್ತಿ ಅವರಿಗೆ ಸಿದ್ದೇಶ್ವರ ಅವರು ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ವರ, ಇಂದು ನಮ್ಮ ಮನೆ ದೇವರ (ಶ್ರೀಶೈಲ ಮಲ್ಲಿಕಾರ್ಜುನ) ದಿನ. ಹೀಗಾಗಿ ಹಿರಿಯರ ಸಲಹೆಯಂತೆ ಸೋಮವಾರ ನಾಮಪತ್ರ ಸಲ್ಲಿದ್ದೇನೆ. ಮಾಧ್ಯಾಹ್ನ ಇನ್ನೊಂದು ನಾಮಪತ್ರವನ್ನು ಸಲ್ಲಿಸುತ್ತೇನೆ. ಮುಜಾಗ್ರತಾ ಕ್ರಮವಾಗಿ ಪತ್ನಿ ಗಾಯತ್ರಿ ಅವರೂ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಇನ್ನೂ ಆಯ್ಕೆಯಾಗದೇ ಇರುವುದು ನಿಮಗೆ ಅನುಕೂಲಗಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ನನಗೆ ಕಾಂಗ್ರೆಸ್‌ ಎದುರಾಳಿ. ಅದೊಂದು ರಾಷ್ಟ್ರೀಯ ಪಕ್ಷ. ಏಪ್ರಿಲ್‌ 4ರವರೆಗೂ ಸಮಯ ಇದೆ. ಅವರೂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಾರೆ. ನಾನು ಅವರ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಲೆ, ಬಿಜೆಪಿ ಅಲೆ ಜೊತೆಗೆ ಆರು ವಿಧಾನಸಭಾ ಕ್ಷೇತ್ರಗಳ ನಮ್ಮ ಶಾಸಕರು, ಇಬ್ಬರು ಮಾಜಿ ಶಾಸಕರು ಹಾಗೂ ನಾನು ಮಾಡಿದ ಕೆಲಸಗಳು ಗೆಲುವಿಗೆ ಪೂರಕವಾಗಲಿದೆ. ಮೊದಲ ಬಾರಿ ನಾನು ಸ್ಪರ್ಧಿಸಿದಾಗ ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬ ಶಾಸಕರೂ ಇರಲಿಲ್ಲ. ಆಗಲೇ 17 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದೆ. ಈಗ ನಮ್ಮೊಂದಿಗೆ ಆರು ಶಾಸಕರ ಜೊತೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಲ್ಲೂ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಹೀಗಾಗಿ ಈ ಬಾರಿಯೂ ಅತಿ ಹೆಚ್ಚು ಮತಗಳ ಅಂತರದಿಂದ ಈ ಬಾರಿಯೂ ಗೆಲ್ಲುತ್ತೇನೆ ಎಂದು ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿನ ಯುವ ಮತದಾರರು ಶೇ 100ರಷ್ಟು ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಶಾಸಕ ಪ್ರೊ. ಎನ್. ಲಿಂಗಣ್ಣ, ಮಾಜಿ ಶಾಸಕ ಬಿ.ಪಿ. ಹರೀಶ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಮುಖಂಡರಾದ ಅಣಬೇರು ಜೀವನಮೂರ್ತಿ, ಹೇಮಂತಕುಮಾರ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !