ಬಳ್ಳಾರಿ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಬರಿಗಾಲಲ್ಲಿ ನಾಮಪತ್ರ ಸಲ್ಲಿಕೆ

ಭಾನುವಾರ, ಏಪ್ರಿಲ್ 21, 2019
26 °C

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪ ಬರಿಗಾಲಲ್ಲಿ ನಾಮಪತ್ರ ಸಲ್ಲಿಕೆ

Published:
Updated:

ಬಳ್ಳಾರಿ: ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ. ದೇವಂದ್ರಪ್ಪ ಅವರು ಸೋಮವಾರ ಬರಿಗಾಲಲ್ಲಿ ಬಂದು ಜಿಲ್ಲಾ‌ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾದ್ ಮನೋಹರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ನಗರದ ಕನಕ ದುರ್ಗಮ್ಮ, ಕೋಟೆ ಮಲ್ಲೇಶ್ವರ, ಬಸವನಕುಂಟೆಯ ಬಸವಣ್ಣ ದೇವಸ್ಥಾನಗಳಿಗೆ ಬರಿಗಾಲಲ್ಲಿ‌ ತೆರಳಿ ಪೂಜೆ ಸಲ್ಲಿಸಿದ್ದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಚೆನ್ನಬಸವನಗೌಡ, ಶಾಸಕ‌ ಜಿ. ಸೋಮಶೇಖರ್ ರೆಡ್ಡಿ ಮುಖಂಡ ಡಾ.ಬಿ.ಕೆ.ಸುಂದರ್, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಾ ಜೊತೆಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ  ದೇವೇಂದ್ರಪ್ಪ, ನಾಳೆ ಬಿಸಿಲಿನಲ್ಲಿ ಕಾರ್ಯಕರ್ತರಿಗೆ ತೊಂದರೆಯಾಗದಿರಲಿ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವೆ. ಏ.2ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಈಶ್ವರಪ್ಪ, ಜಗದೀಶ್ ಶೆಟ್ಟರ್, ಶ್ರೀ ರಾಮುಲು ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ  ನಾಮಪತ್ರ ಸಲ್ಲಿಸುವೆ ಎಂದರು.

ಶಾಸಕ ಜಿ.ಸೋಮಶೇಖರರೆಡ್ಡಿ ಮಾತನಾಡಿ, ‘ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ರಾಜ್ಯ ನಾಯಕರು ಆಗಮಿಸಲಿದ್ದಾರೆ. ಬೆಳಿಗ್ಗೆ 10.30 ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಹೊರಟು ಕನಕ ದುರ್ಗಮ್ಮ ಗುಡಿಯಲ್ಲಿ ಪೂಜೆ ಸಲ್ಲಿಸಿ 11.30 ರ ವೇಳೆಗೆ  ಜಿಲ್ಲಾಸ್ಪತ್ರೆ ಮುಂದೆ ಬಹಿರಂಗ ಸಮಾವೇಶ ನಡೆಸಲಾಗುತ್ತದೆ’ ಎಂದರು.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !