ವೀರಪ್ಪಮೊಯಿಲಿ ಪರ ದೇವೇಗೌಡ, ಸಿದ್ದರಾಮಯ್ಯ ರೋಡ್ ಶೋ

ಶುಕ್ರವಾರ, ಏಪ್ರಿಲ್ 26, 2019
35 °C

ವೀರಪ್ಪಮೊಯಿಲಿ ಪರ ದೇವೇಗೌಡ, ಸಿದ್ದರಾಮಯ್ಯ ರೋಡ್ ಶೋ

Published:
Updated:

ದೊಡ್ಡಬಳ್ಳಾಪುರ: ನಗರದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಸಂಸತ್ ಸದಸ್ಯ ಎಂ.ವೀರಪ್ಪಮೊಯಿಲಿ ಅವರ ಪರವಾಗಿ ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡ, ಯುವಕರು ಸಾಮಾಜಿಕ ಜಾಲತಾಣದಲ್ಲಿನ ಸುಳ್ಳು ಸುದ್ದಿಯನ್ನು ನೋಡಿ ಮೋಸ ಹೋಗಬಾರದು.ನಾವು ಹಳ್ಳಿ ಜನ ಅರ್.ಎಸ್.ಎಸ್.ಅವರಂತೆ ಸಾಮಾಜಿಕ ಜಾಲತಾಣ ಬಳಸುವಷ್ಟು ಬುದ್ದಿವಂತರಲ್ಲ.ಯುವ ಸಮುದಾಯ ದೇಶದ ಇತಿಹಾಸ ಓದಬೇಕು. ಮೋದಿ ಅವರು ಎಲ್ಲವನ್ನು ನಾನೇ ಮಾಡಿದ್ದು ಎನ್ನುವ ಸುಳ್ಳನ್ನು ನಂಬಬಾರದು ಎಂದರು.

ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಮರನ್ನು ಹತ್ಯೆ ಮಾಡಲಾಗುತ್ತಿದೆ. ಜಾತಿ, ಧರ್ಮ ಮರೆತು ಕಾಂಗ್ರೆಸ್ ಅಭ್ಯರ್ಥಿ ವೀರಪ್ಪಮೊಯಿಲಿ ಅವರಿಗೆ ಮತ ನೀಡಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಮ್ಮ ಹಳೇಯ ಭಿನ್ನಾಭಿಪ್ರಾಯ ಮರೆತು ವೀರಪ್ಪ ಮೊಯಿಲಿ ವಿಗೆ ಶ್ತಮಿಸಬೇಕು. ದುರಾತ್ಮ ಮೋದಿ ಆಡಳಿತ ಕೊನೆಗೊಳಿಸಬೇಕು.ರೈತರ ಸಾಲ ಮನ್ನಾಮಾಡಲು ಹಲವಾರು ಬಾರಿ ಮನವಿ ಮಾಡಿದರು ಕಿವಿಗೊಡಲಿಲ್ಲ. ಆದರೆ ಅಂಬಾನಿ, ಅದಾನಿ, ಮಲ್ಯ, ನೀರವ್ ಮೋದಿ ಅವರ ಸಾವಿರಾರು ಕೋಟಿ ಮನ್ನಾ ಮಾಡಿದರು. ಬಿಜೆಪಿ ಚುನಾವಣಾ ಪ್ರಣಾಳಿಕೆ ಹೊಸ ಬಾಟಲಿಯಲ್ಲಿ ಹಳೇ ಮದ್ಯವನ್ನು ಹಾಕಿ ಮತದಾರರನ್ನು ದಾರಿತಪ್ಪಿಸಲು ಹೊರಟಿದ್ದಾರೆ. ವಿದ್ಯುತ್ ಮಗ್ಗಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಿದ್ದು ನಾವು. ಈಗ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ನೀಡುವ ಚಿಂತನೆ ನಡೆಸಲಾಗಿದೆ. ಬಿಜೆಪಿ ಅಭ್ಯರ್ಥಿ ಬಚ್ಚೇಗೌಡ ಅವರು ಜಾತಿಯ ಆಧಾರದ ಮೇಲೆ ಮತ ಕೇಳುವುದು ಬಿಟ್ಟರೆ ಬೇರೆ ವಿಷಯವೇ ಇಲ್ಲ ಎಂದರು.

ರೋಡ್ ಶೋನಲ್ಲಿ ವಸತಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ಜಿ.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಅಧ್ಯಕ್ಷ ಕೆ.ಜಿ.ಅಶೋಕ್, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, ಜೆಡಿಎಸ್ ನಗರ ಅಧ್ಯಕ್ಷ ವಡ್ಡರಹಳ್ಲಿರವಿ, ರಾಜ್ಯ ಉಪಾಧ್ಯಕ್ಷ ಆರ್.ಗೋವಿಂದರಾಜ್, ಜೆಡಿಎಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಅಂಜನಗೌಡ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !