ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸೇರಿ ರಾಷ್ಟ್ರದ ಹಲವೆಡೆ ಗಣ್ಯರಿಂದ ಬಿರುಸಿನ ಮತದಾನ 

Last Updated 18 ಏಪ್ರಿಲ್ 2019, 9:50 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ,ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಬಹುಭಾಷಾ ನಟರಾದ ರಜನಿಕಾಂತ್‌, ಕಮಲ್‌ ಹಾಸನ್‌, ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ, ಪುದುಚೇರಿ ರಾಜ್ಯಪಾಲರಾದಕಿರಣ್ ಬೇಡಿ ಸೇರಿದಂತೆ ಹಲವು ಗಣ್ಯರು ಬೆಳ್ಳಂಬೆಳಗ್ಗೆ ಮತದಾನ ಮಾಡಿದರು.

ಇತ್ತ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ರಾಮನಗರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮತ ಚಲಾಯಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆಹಾಸನದಲ್ಲಿ ಮತ ಚಲಾಯಿಸಿದರು.

ಇತ್ತ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪತ್ನಿ ಕನ್ನಿಕಾ ಪರಮೇಶ್ವರಿ ಅವರೊಂದಿಗೆ ಕೊರಟಗೆರೆಯಲ್ಲಿ ಮತ ಚಲಾಯಿಸಿದರು.

ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್‌ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರು ಮತದಾನ ಮಾಡಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಆಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಸುಶೀಲ್‌ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದು, ಇಂದು ಬೆಳಗ್ಗೆ ಮತ ಚಲಾಯಿಸಿದ್ದಾರೆ.

ಮಣಿಪುರ ಮುಖ್ಯಮಂತ್ರಿಬಿಜೆಪಿಯ ಎನ್‌. ಬಿರೇನ್‌ ಸಿಂಗ್‌ ಮತದಾನ ಮಾಡಿದರು.

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಮತ ಚಲಾಯಿಸಿದರು. ಇತ್ತ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌, ಕನಿಮೊಳಿ ಹಾಗೂ ಎಎಂಎಂಕೆ ಪಕ್ಷದ ಟಿಟಿಡಿದಿನಕರನ್ ಮತ ಚಲಾಯಿಸಿದರು.

*

ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮಗ, ಶಾಸಕ ಯತ್ರೀಂದ್ರ ಅವರೊಂದಿಗೆ ಮೈಸೂರಿನಲ್ಲಿ ಮತಚಲಾಯಿಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರುಬೆಂಗಳೂರುದಕ್ಷಿಣ ಕ್ಷೇತ್ರದಲ್ಲಿ ಮತದಾನ ಮಾಡಿದರು.

ಮಣಿಪುರದ ಗವರ್ನರ್ ನಜ್ಮಾ ಹೆಪ್ತುಲ್ಲಾ ಮತದಾನ ಮಾಡಿದರು.

ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಅಶ್ವಿನಿ ಕುಮಾರ್‌ ಚೌಬೆ ಅವರು ಬಿಹಾರದ ಬಾಗಲ್‌ಪುರದಲ್ಲಿ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT