ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಬೆಳಿಗ್ಗೆ 10 ಗಂಟೆ ವೇಳೆಗೆ ಶೇ 10.8 ಮತದಾನ

ಆರನೇ ಹಂತದ ಮತದಾನ, ಹಕ್ಕು ಚಲಾಯಿಸಿದ ಗಣ್ಯರು *ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ
Last Updated 12 ಮೇ 2019, 5:01 IST
ಅಕ್ಷರ ಗಾತ್ರ

ನವದೆಹಲಿ:ದೆಹಲಿ ಮತ್ತು ಉತ್ತರ ಭಾರತದ ಆರು ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಿಗೆ 6ನೇ ಹಂತದ ಮತದಾನ ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, 10 ಗಂಟೆ ವೇಳೆಗೆ ಶೇ 10.8ರಷ್ಟು ಮತದಾನವಾಗಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್, ಕ್ರಿಕೆಟಿಗ ವಿರಾಟ್ ಕೊಹ್ಲಿ, ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್, ಈಶಾನ್ಯ ದೆಹಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶೀಲಾ ದೀಕ್ಷಿತ್ ಸೇರಿದಂತೆ ಅನೇಕ ಗಣ್ಯರು ಬೆಳಿಗ್ಗೆಯೇ ಹಕ್ಕು ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ:ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಸಿಆರ್‌ಪಿಎಫ್‌ನಒಬ್ಬ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗುರುಗ್ರಾಮದಲ್ಲಿ ಮತ ಚಲಾಯಿಸಿದ ವಿರಾಟ್ ಕೊಹ್ಲಿ
ಗುರುಗ್ರಾಮದಲ್ಲಿ ಮತ ಚಲಾಯಿಸಿದ ವಿರಾಟ್ ಕೊಹ್ಲಿ

ಮತದಾನ ವಿವರ

ರಾಜ್ಯ – ಮತದಾನ ಪ್ರಮಾಣ (%)

ಬಿಹಾರ – 9.03

ಹರಿಯಾಣ – 8.79

ಮಧ್ಯ ಪ್ರದೇಶ – 12.6

ಉತ್ತರ ಪ್ರದೇಶ – 9.37

ಪಶ್ಚಿಮ ಬಂಗಾಳ – 16.99

ಜಾರ್ಖಂಡ್ – 15.36

ದೆಹಲಿ – 7.9

ಈಶಾನ್ಯ ದೆಹಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶೀಲಾ ದೀಕ್ಷಿತ್ ನಿಜಾಮುದ್ದೀನ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು
ಈಶಾನ್ಯ ದೆಹಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶೀಲಾ ದೀಕ್ಷಿತ್ ನಿಜಾಮುದ್ದೀನ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT