2019ರ ಲೋಕಸಭಾ ಚುನಾವಣೆಯಲ್ಲಿ 700ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದರು. ಅವರೆಲ್ಲರ ಭವಿಷ್ಯ ಗುರುವಾರ (ಮೇ 23) ಬಹಿರಂಗವಾಗಲಿದೆ. ಈ ಬಾರಿ ಎಲ್ಲಾ ಪಕ್ಷಗಳೂ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಆದರೆ ಒಟ್ಟು ಅಭ್ಯರ್ಥಿಗಳ ಸಂಖ್ಯೆಯ ಎದುರು ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಶೇ 10ಕ್ಕಿಂತಲೂ ಕಡಿಮೆ. ಮಹಿಳಾ ಅಭ್ಯರ್ಥಿಗಳೂ ‘ತಮ್ಮ ವಿರುದ್ಧ ಕ್ರಿಮಿನಲ್ ಆರೋಪಗಳಿವೆ’ ಎಂದು ಘೋಷಿಸಿಕೊಂಡಿದ್ದಾರೆ. ಮಹಿಳೆಯರ ವಿರುದ್ಧದ ಅಪರಾಧ ಎಸಗಿದ ಆರೋಪ ಹೊತ್ತಿರುವ ಮಹಿಳಾ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.