ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದ್ದು ರೈತರನ್ನು ಕಡೆಗಣಿಸಿದೆ: ಮಾಯಾವತಿ

ಸೋಮವಾರ, ಏಪ್ರಿಲ್ 22, 2019
29 °C

ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದ್ದು ರೈತರನ್ನು ಕಡೆಗಣಿಸಿದೆ: ಮಾಯಾವತಿ

Published:
Updated:

ಲಖನೌ: ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಿರುವ ₹10 ಸಾವಿರ ಕೋಟಿ ಬಾಕಿ ಇದ್ದರೆ ಹೇಗೆ ತಾನೆ ರೈತರು ಸಂತೋಷದಿಂದ ಇರಲು ಸಾಧ್ಯ. ಸರ್ಕಾರ ಉತ್ತರ ಪ್ರದೇಶದ ರೈತರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ರೈತ ವಿರೋಧಿಯಾಗಿದ್ದು, ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಯಾಕೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಸರಿಯಾದ ಕ್ರಮ ಕೈಗೊಂಡಿಲ್ಲ. ಹಿಂದಿನ ಬಿಎಸ್‌ಪಿ ಸರ್ಕಾರಕ್ಕೆ ರೈತರ ಜತೆ ಇದ್ದ ಬದ್ಧತೆ ಈ ಸರ್ಕಾರದಲ್ಲಿ ಕಂಡುಬರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಚೌಕಿದಾರ್(ಕಾವಲುಗಾರ) ಕೇವಲ ಉದ್ಯಮಿಗಳಿಗೆ ಕೆಲಸ ಮಾಡುತ್ತಿದ್ದಾರೆ. ಕಬ್ಬು ಬೆಳೆಗಾರರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಭಾನುವಾರ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದರು.

ಕಬ್ಬು ಬೆಳೆಗಾರರಿಗೆ ಬಾಕಿಯಿರುವ ₹10 ಸಾವಿರ ಕೋಟಿ ಮೊತ್ತಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !