ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಿದ್ದರಾಮಯ್ಯ ಅಡ್ಡಗಾಲು: ಆರ್. ಅಶೋಕ

ಮಂಗಳವಾರ, ಏಪ್ರಿಲ್ 23, 2019
31 °C
ಲೋಕಸಭಾ ಚುನಾವಣೆ 2019

ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಿದ್ದರಾಮಯ್ಯ ಅಡ್ಡಗಾಲು: ಆರ್. ಅಶೋಕ

Published:
Updated:

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಿದ್ದರಾಮಯ್ಯನವರೇ ಅಡ್ಡಗಾಲಾಗಿದ್ದಾರೆ ಎಂದು ಬಿಜೆಪಿ ಮುಖಂಡ ಆರ್. ಅಶೋಕ ಇಲ್ಲಿ ಸೋಮವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ದೇವೇಗೌಡರ ಕುಟುಂಬವನ್ನು ಸಿದ್ದರಾಮಯ್ಯ ಭಯಭೀತರನ್ನಾಗಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹಾಸನ, ತುಮಕೂರು, ಬೆಂಗಳೂರು ಉತ್ತರ, ಮಂಡ್ಯದಲ್ಲಿ ಜೆಡಿಎಸ್ ಗೆಲ್ಲದಂತೆ ಬ್ಯಾರಿಕೇಡ್ ಹಾಕಿದ್ದಾರೆ. ಆ ಬ್ಯಾರಿಕೇಡ್ ತೆರವುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಅವರ ಕಾಲಿಗೆ ರೇವಣ್ಣ ಬಿದ್ದಿದ್ದಾರೆ’ ಎಂದರು.

ರಾಜ್ಯದಲ್ಲಿ ಕಿಚಡಿ ಸರ್ಕಾರ ಅಸ್ತಿತ್ವದಲ್ಲಿದೆ. ಜೀವಂತವಾಗಿದೆಯೋ ಸತ್ತಿದೆಯೋ ಎಂಬುದು ಜನರಿಗೆ ಗೊತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ಪಾಲಿಗೆ ರಾಜ್ಯದ 28 ಕ್ಷೇತ್ರಗಳಲ್ಲೂ ನರೇಂದ್ರ ಮೋದಿ ಅವರೇ ಅಭ್ಯರ್ಥಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪಸಿಂಹ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ, ಇದುವರೆಗೆ ನಾಪತ್ತೆಯಾಗಿದ್ದಯವರು (ಸಿ.ಎಚ್.ವಿಜಯಶಂಕರ್) ಈಗ  ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರತ್ಯೇಕ್ಷರಾಗಿದ್ದಾರೆ ಎಂದರು.

'ಮಂಡ್ಯದಲ್ಲಿ ಸುಮಲತಾ ಅವರ ಪರ ಪ್ರಚಾರ ನಡೆಸುವ ಸಂಬಂಧ ಯಡಿಯೂರಪ್ಪ ಜೊತೆ ಮಾತನಾಡುತ್ತೇನೆ. ದೇವೇಗೌಡ ಅವರ ಕುಟುಂಬ ರಾಜಕೀಯಕ್ಕೆ ಅಂತ್ಯ ಹೇಳಲು ಸುಮಲತಾ ಅವರನ್ನು ಬೆಂಬಲಿಸಾಗಿದೆ' ಎಂದು ನುಡಿದರು.

ಬರಹ ಇಷ್ಟವಾಯಿತೆ?

  • 4

    Happy
  • 1

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !