ಸೋಮವಾರ, ಫೆಬ್ರವರಿ 24, 2020
19 °C

ವೈಎಸ್‌ಆರ್‌ಗೆ ಮತ ಹಾಕಿದರೆ, ನೀವೇ ಮರಣಶಾಸನ ಬರೆದು ಕೊಂಡಂತೆ:  ನಾಯ್ಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣ: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿದರೆ, ನಿಮಗೆ ನೀವೇ ಮರಣಶಾಸನ ಬರೆದು ಕೊಂಡಂತೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಇಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಜಗನ್‌ ರೆಡ್ಡಿ ರಾಜ್ಯದ ಜನರ ಹಣವನ್ನು ಲೂಟಿ ಮಾಡಿದ್ದಾರೆ, ಅವರಿಗೆ ಮತ ಹಾಕಿದರೆ ನಿಮಗೆ ನೀವೇ ಮರಣಶಾಸನ ಬರೆದು ಕೊಂಡಂತೆ ಎಂದು ಅವರು ತಿಳಿಸಿದರು. ವಿಧಾನಸಭಾ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಡಿಪಿಯನ್ನು ಬೆಂಬಲಿಸಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. 

ಈ ರಾಜ್ಯದ ಪ್ರತಿ ಕುಟುಂಬಕ್ಕೂ ನಾನು ಹಿರಿಯ ಮಗನಿದ್ದಂತೆ, 98 ಲಕ್ಷ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡಿದ್ದೇನೆ, ಹಿರಿಯ ನಾಗರಿಕರಿಗೆ ಮಾಸಿಕ ₹2000 ಪಿಂಚಣಿ ನೀಡಲಾಗುತ್ತಿದೆ, ಗೋದಾವರಿ ನದಿ ನೀರನ್ನು ವಿಶಾಖಪಟ್ಟಣದವರೆಗೂ ತರಲಾಗಿದೆ, ಉತ್ತರ ಆಂಧ್ರಪ್ರದೇಶದ ಸುಜಲಾ ಶ್ರವಂತಿ ನೀರಾವರಿ ಯೋಜನೆ ಈ ವರ್ಷಾಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು. 

 ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರ ಕೈವಾಡ ಇರಬಹುದು ಎಂದು ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು