ಹಿಂಬಡ್ತಿ ತಡೆಯಲು ಕಾಯ್ದೆ ‘ಸುಪ್ರೀಂ’ನಲ್ಲಿ ಪ್ರಶ್ನೆ: ಅಹಿಂಸಾ

7

ಹಿಂಬಡ್ತಿ ತಡೆಯಲು ಕಾಯ್ದೆ ‘ಸುಪ್ರೀಂ’ನಲ್ಲಿ ಪ್ರಶ್ನೆ: ಅಹಿಂಸಾ

Published:
Updated:

ಬೆಂಗಳೂರು: ಬಡ್ತಿ ಮೀಸಲು ಕಾಯ್ದೆ ರದ್ದುಪಡಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನಿಂದ ಹಿಂಬಡ್ತಿ ಭೀತಿ ಎದುರಿಸುತ್ತಿದ್ದ ಪರಿಶಿಷ್ಟ ವರ್ಗದ ನೌಕರರ ಹಿತ ಕಾಪಾಡಲು ರಾಜ್ಯ ಸರ್ಕಾರ ರೂಪಿಸಿದ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ‘ಅಹಿಂಸಾ’ (ಅಲ್ಪಸಂಖ್ಯಾತ, ಹಿಂದುಳಿದ, ಸಾಮಾನ್ಯ ವರ್ಗದ ನೌಕರರ ಒಕ್ಕೂಟ) ತೀರ್ಮಾನಿಸಿದೆ.

ಭಾನುವಾರ ನಡೆದ ಸಭೆಯ ಬಳಿಕ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಂ.ನಾಗರಾಜ, ‘ಕಾಯ್ದೆ ಜಾರಿಗೆ ತಡೆಯಾಜ್ಞೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು’ ಎಂದರು.

‘ಜುಲೈ 2ರವರೆಗೆ ಸುಪ್ರೀಂ ಕೋರ್ಟ್‌ಗೆ  ರಜೆ. ಕೋರ್ಟ್ ಆರಂಭಗೊಂಡ ದಿನವೇ ಅರ್ಜಿ ಸಲ್ಲಿಸಲಾಗುವುದು. ರಾಜ್ಯ ಸರ್ಕಾರದ ‘ಬಡ್ತಿ ಮೀಸಲು ಕಾಯ್ದೆ 2002’ ಅನ್ನು ರದ್ದು ಪಡಿಸಿ 2017ರ ಫೆ. 9ರಂದು ನೀಡಿದ ಆದೇಶ ಪಾಲಿಸಿಲ್ಲ ಎಂದು ಸಲ್ಲಿಕೆಯಾದ ನ್ಯಾಯಾಂಗ ಅರ್ಜಿ ಜುಲೈ 4ರಂದು ವಿಚಾರಣೆಗೆ ಬರಲಿದೆ’ ಎಂದೂ ಅವರು ತಿಳಿಸಿದರು.

ಹಿಂಬಡ್ತಿ ಪಡೆಯುವ ನೌಕರರಿಗೆ ಸೂಪರ್‌ ನ್ಯೂಮರರಿ ಹುದ್ದೆ ಸೃಜಿಸಿ, ಅದೇ ಹುದ್ದೆಯಲ್ಲಿ ಮುಂದುವರಿಯಲು ಹೊಸ ಕಾಯ್ದೆ ಅವಕಾಶ ಕಲ್ಪಿಸಿದೆ.

ಬರಹ ಇಷ್ಟವಾಯಿತೆ?

 • 6

  Happy
 • 2

  Amused
 • 5

  Sad
 • 2

  Frustrated
 • 2

  Angry

Comments:

0 comments

Write the first review for this !