ಶುಕ್ರವಾರ, ಮೇ 27, 2022
24 °C

ನೀರಿಗಾಗಿ ರಸ್ತೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿ ವಿಜಯಪುರದ ಆದರ್ಶ ನಗರ ನಿವಾಸಿಗಳು ಶನಿವಾರ ದಿಢೀರ್‌ ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಖಾಲಿ ಕೊಡಗಳೊಂದಿಗೆ ರಸ್ತೆಗೆ ಅಡ್ಡಲಾಗಿ ಕುಳಿತು, ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡಿದರು. ಮಹಾನಗರ ಪಾಲಿಕೆ ಆಡಳಿತ, ಜಲಮಂಡಳಿ ಅಧಿಕಾರಿಗಳ ವಿರುದ್ಧ ಇದೇ ಸಂದರ್ಭ ಹರಿಹಾಯ್ದರು.

ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ಬಂದ ಜಲಮಂಡಳಿ ಅಧಿಕಾರಿಗಳಿಂದ ಲಿಖಿತ ಭರವಸೆ ಪಡೆದ ಬಳಿಕವೇ ಆದರ್ಶ ನಗರ ನಿವಾಸಿಗಳು ಪ್ರತಿಭಟನೆ ವಾಪಸ್ ಪಡೆದಿದ್ದು ವಿಶೇಷವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು