ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಬುಧವಾರ, ಜೂನ್ 26, 2019
27 °C
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಮೆರವಣಿಗೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Published:
Updated:
Prajavani

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ ಪಕ್ಷ) ಜಿಲ್ಲಾ ಸಮಿತಿ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಮೆರವಣಿಗೆ ನಡೆಸಲಾಯಿತು.

ಇಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಆರಂಭಗೊಂಡ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಕೆಲಕಾಲ ಪ್ರತಿಭಟನಾ ಸಭೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಪ್ರಸನ್ನಗೆ ಮನವಿ ಸಲ್ಲಿಸಲಾಯಿತು.

ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ‘ಬರಗಾಲ ಹಿನ್ನೆಲೆ ಹಿಂಗಾರಿ–ಮುಂಗಾರಿ ಬೆಳೆಗಳು ಕೈಸೇರಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನರಿತ ರಾಜ್ಯ ಸರ್ಕಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಶಾಶ್ವತ ಬರಗಾಲ ಪ್ರದೇಶಗಳೆಂದು ಘೋಷಿಸಿದೆ. ಆದರೆ, ಕಾಮಗಾರಿಗಳು ಮಾತ್ರ ಸರಿಯಾಗಿ ನಡೆದಿಲ್ಲ. ಹೀಗಾಗಿ ಕೂಡಲೇ ಶಾಶ್ವತ ಬರಗಾಲ ಕಾಮಗಾರಿ ಸಮರೋಪಾದಿಯಲ್ಲಿ ಮಾಡಬೇಕು’ ಎಂದರು.

‘₹ 25,000 ಪರಿಹಾರ ಧನ ಕೊಡಬೇಕು. ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524ಕ್ಕೆ ಹೆಚ್ಚಿಸಬೇಕು. ಜಲಾಶಯದಲ್ಲಿ ಸದ್ಯ ಲಭ್ಯ ಇರುವ ನೀರನ್ನು ಎಡ, ಬಲ ದಂಡೆ ಕಾಲುವೆಗೆ ನೀಡಬೇಕು. ಕೃಷ್ಣಾ ಹಾಗೂ ಭೀಮಾ ನದಿಗಳಿಂದ ಎಲ್ಲಾ ಕೆರೆಗಳಿಗೆ ನೀರು ತಂಬಿಸಬೇಕು. ಉದ್ಯೋಗ ಖಾತ್ರಿಯಲ್ಲಿ ₹ 300 ವೇತನ ಕೊಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಾರಾಯ ಈಳಗೇರ, ‘ಸರ್ಕಾರದ ಆದೇಶದ ಪ್ರಕಾರ ಅಕ್ರಮ ಮನೆಗಳನ್ನು ಸಕ್ರಮಗೊಳಿಸಬೇಕು. ಹಕ್ಕು ಪತ್ರ ನೀಡಬೇಕು. ಆಶ್ರಯ ಅಂಬೇಡ್ಕರ್‌, ಇಂದ್ರಾ ಆವಾಸ್ ಮನೆಗಳ ಹಕ್ಕು ಪತ್ರ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ಸಮರ್ಪಕವಾಗಿ ನೀರು ಪೂರೈಸಬೇಕು. ಹೋಬಳಿ ಮಟ್ಟದಲ್ಲಿ ಗೋಶಾಲೆಗಳನ್ನು ತೆರೆಯಬೇಕು’ ಎಂದು ಆಗ್ರಹಿಸಿದರು.

ಭೀಮಶಿ ಕೋಟ್ಯಾಳ, ರಾಮಣ್ಣ ಶಿರೆಗೋಳ, ಖಾಜಾಸಾಬ್‌ ಕೋಲಾರ, ಸಿದ್ದಪ್ಪ ಹಳಗುಂಡಗಿ, ಪರಶುರಾಮ ಮಂಟೂರ, ಬಸವರಾಜ ಗುಡಿಮನಿ, ಸಿದ್ರಾಮ ಬಂಗಾರಿ, ಮೈಬೂಬ ಶಿವಣಗಿ, ಸೋಮಶೇಖರ, ಸುರೇಖಾ ರಜಪೂತ, ಭಾರತಿ ವಾಲಿ, ಸುನಂದಾ ನಾಯಕ, ಅಶ್ವಿನಿ ತಳವಾರ, ದಾನಮ್ಮ ಗುಗ್ಗರಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !