‘ಶಿವಶಂಕರಪ್ಪ, ದರ್ಶನ್‌ಗೆ ವಿನಾಯಿತಿ ಏಕೆ’

ಬುಧವಾರ, ಜೂನ್ 26, 2019
24 °C
ದೊರೆಸ್ವಾಮಿ ನೇತೃತ್ವದಲ್ಲಿ ಭೂಕಬಳಿಕೆ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ

‘ಶಿವಶಂಕರಪ್ಪ, ದರ್ಶನ್‌ಗೆ ವಿನಾಯಿತಿ ಏಕೆ’

Published:
Updated:
Prajavani

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಭೂಕಬಳಿಕೆ ವಿರೋಧಿ ಹೋರಾಟ ಸಮಿತಿ ಸದಸ್ಯರು ಬಿಬಿಎಂಪಿ ಕೇಂದ್ರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. 

‘ಹೈಕೋರ್ಟ್ ಚಾಟಿ ಬೀಸಿದ ನಂತರ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಬಿಬಿಎಂಪಿಯು ಬಡವರ ಸಣ್ಣ ಮನೆಗಳನ್ನು ನಿರ್ದಾಕ್ಷಿಣ್ಯವಾಗಿ ನೆಲಸಮಗೊಳಿಸಿತು. ಆದರೆ, ಪ್ರಭಾವಿ ವ್ಯಕ್ತಿಗಳು ಬಿಬಿಎಂಪಿ ನೋಟಿಸ್‌ ನೀಡಿದ ಬೆನ್ನಲ್ಲೇ ನ್ಯಾಯಾಲಯದಿಂದ ತಡೆಯಾಜ್ಞೆ ತಂದರು’ ಎಂದು ಸಮಿತಿಯ ಗೌರವಾಧ್ಯಕ್ಷ ಎಚ್.ಎಸ್. ದೊರೆಸ್ವಾಮಿ ದೂರಿದರು.

‘ನಟ ದರ್ಶನ್‌ ಮತ್ತು ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರಂತಹ ಪ್ರಭಾವಿಗಳು ಮಾಡಿದ್ದ ಒತ್ತುವರಿ ಇನ್ನೂ ತೆರವುಗೊಳಿಸಿಲ್ಲ. ಅಂತಹವರಿಗೆ ವಿನಾಯಿತಿ ಏಕೆ? ಯಾರೇ ಪ್ರಭಾವಿಗಳು ರಾಜಕಾಲುವೆ ಒತ್ತುವರಿ ಮಾಡಿದ್ದರೂ, ಅದನ್ನು ತೆರವು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

‘ರಾಜಕಾಲುವೆ ಮತ್ತು ಕೆರೆಗಳನ್ನು ಅಕ್ರಮ ಕಟ್ಟಡಗಳು ಅತಿಕ್ರಮಿಸಿವೆ. ಇದರಿಂದ ಸರಾಗವಾಗಿ ನೀರು ಹರಿಯದೆ ತಗ್ಗು ಪ್ರದೇಶಗಳು ಜಲಾವೃ ತವಾಗಿವೆ’ ಎಂದು ಅವರು ದೂರಿದರು. 

‘ಬೇರೆ ಬೇರೆ ರೀತಿಯ ಒತ್ತುವರಿ ಗಳಿಗೆ ನಿರ್ದಿಷ್ಟ ಕಾಲಮಿತಿಯ ಕ್ರಿಯಾ ಯೋಜನೆಗಳನ್ನು ರೂಪಿಸಿ, ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಕಾರ್ಯಗತಗೊಳಿಸ ಬೇಕು. ನೀರು ಸರಾಗವಾಗಿ ಹರಿಯಲು ಅಡಚಣೆಯಾಗಿರುವ ಮುಖ್ಯ ಒತ್ತುವರಿಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆ ಮೇರೆಗೆ ತೆರವುಗೊಳಿಸಬೇಕು’ ಎಂದು ಸಮಿತಿ ಸದಸ್ಯರು ಒತ್ತಾಯಿಸಿದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !