ಜಾರ್ಜ್‌ ಕಚೇರಿ ಎದುರು ಪ್ರತಿಭಟನೆ

ಶನಿವಾರ, ಮಾರ್ಚ್ 23, 2019
24 °C

ಜಾರ್ಜ್‌ ಕಚೇರಿ ಎದುರು ಪ್ರತಿಭಟನೆ

Published:
Updated:

ಬೆಂಗಳೂರು: ‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹುದ್ದೆಗೆ ಮೇಲ್ಜಾತಿಯ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಈ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಬೇಕು’ ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಪದಾಧಿಕಾರಿಗಳು ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

‘1984ರಲ್ಲಿ ಮಂಡಳಿಯು ನೇರ ನೇಮಕಾತಿಗಾಗಿ ಪ್ರಕಟಣೆ ನೀಡಿತ್ತು. ಎರಡು ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿತ್ತು. ಆದರೆ, ಒಂದು ಹುದ್ದೆಗೆ ಎಂ. ರಾಮ ಎಂಬುವರನ್ನು ನೇಮಕ ಮಾಡಲಾಗಿತ್ತು. ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಹುದ್ದೆ ಗಿಟ್ಟಿಸಿದ್ದರು’ ಎಂದು ಅವರು ದೂರಿದರು.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !