ಜನೌಷಧ ಮಳಿಗೆ ತೆರೆಯಲು ಆಗ್ರಹಿಸಿ ಪ್ರತಿಭಟನೆ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಜನೌಷಧ ಮಳಿಗೆ ತೆರೆಯಲು ಆಗ್ರಹಿಸಿ ಪ್ರತಿಭಟನೆ

Published:
Updated:
Prajavani

ಚಾಮರಾಜನಗರ: ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ನಾಲ್ಕೂವರೆ ತಿಂಗಳಿಗಳಿಂದ ಮುಚ್ಚಿರುವ ಜನರಿಕ್‌ ಔಷಧ (ಜನೌಷಧ) ಮಳಿಗೆ ತೆರುವಂತೆ ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಸ್ಪತ್ರೆಯ ಎದುರುಗಡೆ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್‌, ಆರೋಗ್ಯ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ಸ್ಥಳಕ್ಕೆ ಬಂದ ಡೀನ್ ಡಾ‌. ರಾಜೇಂದ್ರ, ಜಿಲ್ಲಾ ಸರ್ಜನ್ ಡಾ. ರಘುರಾಂ ಸರ್ವೇಗಾರ್ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

‘ಜನೌಷಧ ಮಳಿಗೆ ಇರುವ ಜಾಗ ನಮ್ಮದು. ಕಟ್ಟಡ ನಮ್ಮದಲ್ಲ. ಎಚ್‌ಎಲ್‌ಎಲ್‌ ಎಂಬ ಕಂಪನಿ ಟೆಂಡರ್‌ ಪಡೆದುಕೊಂಡಿದೆ’ ಎಂದು ಹೇಳಿದರು.

ಜಿಲ್ಲಾ ಸರ್ಜನ್ ಡಾ. ರಘುರಾಂ ಸರ್ವೇಗಾರ್ ಅವರು ಮಾತನಾಡಿ, ‘ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ. ಎಂಐಎಸ್‌ಎಲ್ ಮೂಲಕ ಬೇರೊಂದು ಜನರಿಕ್ ಮಳಿಗೆ ತೆರೆಯಲು ನಿರ್ಧರಿಸಲಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಜಾಗದ ಸಮಸ್ಯೆಯಾಗಿದೆ’ ಎಂದು ಹೇಳಿದರು.

ಪಟ್ಟು ಪಡದ ಪ್ರತಿಭಟನಾಕಾರರು ಜನೌಷಧ ಮಳಿಗೆ ತೆರೆದು ಬಡವರಿಗೆ ಅನುಕೂಲ ಮಾಡಿಕೊಬೇಕು ಎಂದು ಆಗ್ರಹಿಸಿದರು. 

ತಿಂಗಳೊಳಗೆ ಜನೌಷಧಿ ಮಳಿಗೆ ತೆರೆಯುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಕೈ ಬಿಟ್ಟರು.

ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕೇಂದ್ರ ಸರ್ಕಾರ ಬಡ ಜನರಿಗೆ ಕಡಿಮೆ ದರದಲ್ಲಿ ಔಷಧ ವಿತರಿಸುವ ಸಲುವಾಗಿ ದೇಶದಾದ್ಯಂತ ಜೆನರಿಕ್ ಔಷಧ‌ ಮಳಿಗೆ ತೆರೆದಿದೆ. ಆದರೆ ನಗರದಲ್ಲಿರುವ ಮಳಿಗೆ ನಾಲ್ಕು ತಿಂಗಳುಗಳಿಂದ ಮುಚ್ಚಿದ್ದು, ಬಡಜನರಿಗೆ ತೊಂದರೆಯಾಗಿದೆ’ ಎಂದರು.

ಆಸ್ಪತ್ರೆ ವಿರುದ್ಧವೂ ಆಕ್ರೋಶ: ಪ್ರತಿಭಟನಾಕಾರರು ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

‘ಆಸ್ಪತ್ರೆಯ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಚಾಮರಾಜನಗರ ಬಂದ್‌ಗೆ ಕರೆ ನೀಡಲಾಗುವುದು’ ಎಂದು ಶ್ರೀನಿವಾಸ ಗೌಡ ಎಚ್ಚರಿಕೆ ನೀಡಿದರು. 

ಸೇನಾ ಪಡೆಯ ಶಾ.ಮುರಳಿ, ಚಾ.ಸಿ.ಸೋಮನಾಯಕ, ಚಾ.ಗು.ನಾಗರಾಜು, ಗು.ಪುರುಷೋತ್ತಮ್, ನಿಜಧ್ವನಿ ಗೋವಿಂದರಾಜು, ಶಿವಶಂಕರನಾಯಕ, ವೀರಭದ್ರ, ತಾಂಡವಮೂರ್ತಿ, ಸ್ವಾಮಿ, ಮಹೇಶ್‌ಗೌಡ, ನಂಜುಂಡಸ್ವಾಮಿ, ಚಂದ್ರಣ್ಣ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !