ನೀರಿಗಾಗಿ ಪ್ರತಿಭಟನೆ
ದಾಬಸ್ ಪೇಟೆ: ‘ಹದಿನೈದು ದಿನಗಳಿಂದ ಕುಡಿಯಲು ಹನಿ ನೀರಿಲ್ಲ. ಪಂಚಾಯಿತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ, ನೀರು ಪೂರೈಸುವ ಪ್ರಯತ್ನ ಮಾಡಿಲ್ಲ’ ಎಂದು ಆರೋಪಿಸಿ ಶಿವಗಂಗೆ ಗ್ರಾಮ ಪಂಚಾಯಿತಿಯ ಘಂಟೆಹೊಸಹಳ್ಳಿ ಗ್ರಾಮದ ಜನರು ಪಂಚಾಯಿತಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ಪಂಚಾಯಿತಿ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆಯೇ ಗ್ರಾಮದ ಮಹಿಳೆಯರು ಕಚೇರಿಯೊಳಗೆ ಹೋಗಿ ಎಲ್ಲರನ್ನು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಸಿದರೂ, ಅವು ಕೆಟ್ಟು ಹೋಗಿವೆ. ರಿಪೇರಿ ಮಾಡಿಸಲು ಜನಪ್ರತಿನಿಧಿಗಳಾಗಲೀ, ಅಧಿಕಾರಿಗಳಾಗಲೀ ಮುಂದಾಗಿಲ್ಲ’ ಎಂದೂ ದೂರಿದರು. ಗ್ರಾಮದಲ್ಲಿ 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ನಿವಾಸಿಗಳು ನೀರಿಲ್ಲದೆ ಪರದಾಡುವಂತಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.