ಸ್ಥಳೀಯರ ಪ್ರತಿಭಟನೆ: ಲಾಠಿಚಾರ್ಜ್

7
ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಬ್ಯಾಂಕ್ ನೌಕರ ಸಾವು

ಸ್ಥಳೀಯರ ಪ್ರತಿಭಟನೆ: ಲಾಠಿಚಾರ್ಜ್

Published:
Updated:
Prajavani

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಸಮೀಪದ ಇಬ್ಬಲೂರು ಜಂಕ್ಷನ್‌ನಲ್ಲಿ ಶನಿವಾರ ಬೆಳಿಗ್ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದು ಬ್ಯಾಂಕ್ ನೌಕರ ದೊಡ್ಡಮುನಿಯಪ್ಪ (55) ಮೃತಪಟ್ಟರು.

ಘಟನೆಯಿಂದ ರೊಚ್ಚಿಗೆದ್ದ ಮೃತರ ಸಂಬಂಧಿಗಳು ಹಾಗೂ ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಲಾರಿ ಮೇಲೆ ಕಲ್ಲು ತೂರಿದ್ದಲ್ಲದೆ, ಬೆಂಕಿ ಹಚ್ಚು
ವುದಕ್ಕೂ ಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿ
ದರು. ಇದರಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಂಚಾರ ವ್ಯವಸ್ಥೆಯೂ ಸಂಪೂರ್ಣ ಹದಗೆಟ್ಟು, ಸುಮಾರು ಎರಡು ಕಿ.ಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ‘ಇಬ್ಬಲೂರು ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗೆ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸಂಚಾರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ಕೊಟ್ಟ ಬಳಿಕ ಸ್ಥಳೀಯರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

‘ಇಬ್ಬಲೂರು ನಿವಾಸಿಯಾದ ದೊಡ್ಡಮುನಿಯಪ್ಪ, ಶನಿವಾರ ಬ್ಯಾಂಕ್‌ಗೆ ರಜೆ ಇದ್ದುದರಿಂದ ಊರಿಗೆ ಹೊರಟಿದ್ದರು. ಬೆಳಿಗ್ಗೆ 10.15ರ ಸುಮಾರಿಗೆ ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಮೈಮೇಲೆ ಚಕ್ರ ಹರಿದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದರು. ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾದ’ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. 

ಮೂರನೇ ಪ್ರಕರಣ: ‘ಇಬ್ಬಲೂರು ಜಂಕ್ಷನ್‌ ಬಳಿ ರಸ್ತೆ ಉಬ್ಬು, ಸ್ಕೈವಾಕ್‌ಗಳು ಇಲ್ಲದ ಕಾರಣ ಪಾದಚಾರಿಗಳು ರಸ್ತೆ ದಾಟಲು ಪರದಾಡುತ್ತಿದ್ದಾರೆ. ಒಂದೂವರೆ ತಿಂಗಳಲ್ಲಿ ಮೂವರು ಪಾದಚಾರಿಗಳು ಇದೇ ಜಂಕ್ಷನ್‌ನಲ್ಲಿ ಪ್ರಾಣ ಬಿಟ್ಟಿದ್ದಾರೆ. ಇಷ್ಟಾದರೂ ಇದನ್ನು ‘ಅಪಘಾತ ವಲಯ’ ಎಂದು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ’ ಎಂದು ಸ್ಥಳೀಯರು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !