ಪರೀಕ್ಷೆಯಲ್ಲಿ ಅನುತ್ತೀರ್ಣ: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಬುಧವಾರ, ಏಪ್ರಿಲ್ 24, 2019
23 °C

ಪರೀಕ್ಷೆಯಲ್ಲಿ ಅನುತ್ತೀರ್ಣ: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಕೊಲ್ಹಾರ (ವಿಜಯಪುರ): ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ಸೋಮವಾರವೇ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ ಬೆಳಕಿಗೆ ಬಂದಿದೆ.

ಪಟ್ಟಣದ ಸಚಿನ ಹುಚ್ಚಪ್ಪ ಸಾರವಾಡ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

‘ಮುದ್ದೇಬಿಹಾಳದ ಖಾಸಗಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದ ಸಚಿನ, ಪರೀಕ್ಷೆಯಲ್ಲಿ ಎರಡು ವಿಷಯದಲ್ಲಿ ಅನುತ್ತೀರ್ಣನಾಗಿದ್ದ ಸುದ್ದಿ ತಿಳಿದೊಡನೆ ಮಾನಸಿಕವಾಗಿ ನೊಂದಿದ್ದಾನೆ. ಬೇಸರಗೊಂಡು ಆಸಂಗಿ ರಸ್ತೆಯಲ್ಲಿನ ಸಂಬಂಧಿಕರ ತೋಟದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ’ ಎಂದು ಕೊಲ್ಹಾರ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !