ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ

7

ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ

Published:
Updated:
Prajavani

ಚಾಮರಾಜನಗರ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಸಮೀಪದ ರಾಮಸಮುದ್ರದಲ್ಲಿ ಸೋಮವಾರ ನಡೆಯಿತು. 

ರಾಮಸಮುದ್ರದ ವೀರಶೈವ ಸಮುದಾಯ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಚಾಮರಾಜನಗರದ ವಿರಕ್ತಮಠದ ಚೆನ್ನಬಸವ ಸ್ವಾಮೀಜಿ, ರಾಮಸಮುದ್ರದ ಮಹದೇವ ಸ್ವಾಮೀಜಿ, ಸೋಮವಾರಪೇಟೆಯ ಕಾಲಾಗ್ನಿ ರುದ್ರ ಸ್ವಾಮೀಜಿ, ಹಂಡ್ರಕಳ್ಳಿ ಶ್ರೀಗಳು ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸರ್ಪಭೂಷಣ ಸ್ವಾಮೀಜಿ ಅವರು, ‘ಬಸವಣ್ಣನವರ ಕಾಯಕ ತತ್ವದಲ್ಲಿ ನಂಬಿಕೆ ಇಟ್ಟು ಅದರಂತೆ ಬದುಕಿ ಬಾಳಿದ ಶಿವಕುಮಾರ ಸ್ವಾಮೀಜಿ ಅವರು ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ’ ಎಂದು ಹೇಳಿದರು.

‘ನಾಡಿಗೆ ಸಿದ್ಧಗಂಗಾ ಮಠ ನೀಡಿರುವ ಕೊಡುಗೆ ಅನನ್ಯ. ಶ್ರೀಗಳು ಅಕ್ಷರ, ಅನ್ನ ಹಾಗೂ ಜ್ಞಾನ ದಾಸೋಹದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ಬೆಳಕಾಗಿದ್ದಾರೆ’ ಎಂದರು.

ಮರಿಯಾಲದ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಶಿವಕುಮಾರ ಸ್ವಾಮೀಜಿ ಶಿವಸಾಯುಜ್ಯ ಕಂಡರೂ, ದೇಶದ ಎಲ್ಲ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ಹೇಳಿದರು.

ಅನ್ನಸಂತರ್ಪಣೆ: ಪುಣ್ಯಸ್ಮರಣೆಯ ಬಳಿಕ 6 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆ ಮಾಡಲಾಯಿತು.

ವೀರಶೈವ ಮುಖಂಡರು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತ ವೃಂದ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !