ಸೋಮವಾರ, ಸೆಪ್ಟೆಂಬರ್ 16, 2019
22 °C
ಇಂಡಿ, ಬಸವನಬಾಗೇವಾಡಿ, ತಾಳಿಕೋಟೆ ಪುರಸಭೆಗಳಿಗೆ ನಾಮಪತ್ರ ಸಲ್ಲಿಕೆ ಆರಂಭ

ಪುರಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟ

Published:
Updated:

ವಿಜಯಪುರ: ಜಿಲ್ಲೆಯ ಇಂಡಿ, ಬಸವನಬಾಗೇವಾಡಿ, ತಾಳಿಕೋಟೆ ಪುರಸಭೆಗಳಿಗೆ ಸಂಬಂಧಿಸಿದಂತೆ ಸದಸ್ಯ ಸ್ಥಾನಗಳ ಆಯ್ಕೆಗೆ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅಧಿಸೂಚನೆ ಹೊರಡಿಸಿ, ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ.

ಮೇ 9ರ ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸುವ ದಿನ. ಮೇ 16ರ ಗುರುವಾರ ನಾಮಪತ್ರ ಸಲ್ಲಿಸಲು ಕೊನೆ ದಿನ. ಮೇ 17ರ ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಮೇ 20ರ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಮೇ 29ರ ಬುಧವಾರ ಮತದಾನದ ಅವಶ್ಯವಿದ್ದರೆ ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಮತದಾನ ನಡೆಯಲಿದೆ.

ಮೇ 30ರ ಗುರುವಾರ ಅವಶ್ಯವಿದ್ದರೆ ಮರು ಮತದಾನ ನಡೆಯಲಿದೆ. ಮೇ 31ರ ಶುಕ್ರವಾರ ಬೆಳಿಗ್ಗೆ 8ರಿಂದ ಆಯಾ ತಾಲ್ಲೂಕಿನ ಕೇಂದ್ರ ಸ್ಥಳಗಳಲ್ಲಿ ಮತಗಳ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ. ಜತೆಗೆ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post Comments (+)