ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

ಮಂಗಳವಾರ, ಜೂನ್ 18, 2019
24 °C
ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ವಿಳಂಬ

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Published:
Updated:
Prajavani

ಬೆಂಗಳೂರು: ನಗರದ ಹಲವೆಡೆ ಗುರುವಾರ ರಾತ್ರಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ.

ಲಾಲ್‌ಬಾಗ್‌, ರಿಚ್ಮಂಡ್‌ ಸರ್ಕಲ್‌, ಹಲಸೂರು, ಟ್ರಿನಿಟಿ, ಎಂ.ಜಿ.ರಸ್ತೆ, ಶಿವಾಜಿನಗರ, ಹನುಮಂತನಗರ, ಶ್ರೀನಿವಾಸನಗರ, ಯಶವಂತಪುರ ಸೇರಿದಂತೆ ಹಲವಡೆ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತ ಕಾರಣ ವಾಹನ ಸವಾರರು ಪರದಾಡುವಂತಾಯಿತು. 

ರಿಚ್ಮಂಡ್‌ ಸರ್ಕಲ್‌ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರೆ, ಹನುಮಂತನಗರದ 4ನೇ ಅಡ್ಡರಸ್ತೆ ಕಾರ್‌ನ ಮೇಲೆ ಮರ ಬಿದ್ದ ಪರಿಣಾಮ ಕಾರ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಬಿಬಿಎಂಪಿ ಸಿಬ್ಬಂದಿ ಮರ ತೆರವುಗೊಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮುದ್ದಲಿಂಗನಹಳ್ಳಿ ಬಳಿ ರೈಲು ಹಳಿ ಮೇಲೆ ಗುರುವಾರ ರಾತ್ರಿ ಮರ ಬಿದ್ದಿತ್ತು. ಹೀಗಾಗಿ ರಾಣಿ ಚನ್ನಮ್ಮ ಎಕ್ಸ್‌ಪ್ರೆಸ್‌ ರೈಲು ವಿಳಂಬವಾಗಿ ಸಂಚರಿಸಿತು.

ಮಾನ್ಸೂನ್ ಮಾರುತಗಳು ಇದೇ 8ರಂದು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಮುಂಗಾರು ಪೂರ್ವದಲ್ಲಿ ಗುಡುಗು ಸಹಿತ ಮಳೆ ಆಗುವುದು ಸಾಮಾನ್ಯ. ಇನ್ನೂ ಎರಡು ದಿನ ಈ ರೀತಿಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 11

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !