‘ಪದವಿ, ಪ್ರಸಿದ್ಧಿಯ ವ್ಯಾಮೋಹಕ್ಕೆ ಸಿಲುಕದಿರಿ’

ಬುಧವಾರ, ಜೂನ್ 19, 2019
25 °C

‘ಪದವಿ, ಪ್ರಸಿದ್ಧಿಯ ವ್ಯಾಮೋಹಕ್ಕೆ ಸಿಲುಕದಿರಿ’

Published:
Updated:
Prajavani

ಬೆಂಗಳೂರು: ‘ವೈದ್ಯಕೀಯ ವಿದ್ಯಾರ್ಥಿಗಳು ಪದವಿಯ ಮೋಹದಿಂದ ಹಾಗೂ ಪ್ರಸಿದ್ಧಿ ಗಳಿಸುವ ಉದ್ದೇಶದಿಂದ ಕೆಲಸ ಮಾಡಬಾರದು. ಮಾಡುವ ಕೆಲಸವು ಜನರಿಗೆ ಫಲಕಾರಿಯಾಗಬೇಕು. ಸಮಾಜಕ್ಕೆ ಉಪಯೋಗವಾಗಬೇಕು’ ಎಂದು ಕೇರಳ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಕೆ.ಸಿ ನಾಯರ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದಲ್ಲಿ ಶನಿವಾರ ಏರ್ಪಡಿಸಿದ್ದ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ಸಂವಹನದ ಮಹತ್ವದ ಬಗ್ಗೆ ವಿವರಿಸಿದ ಅವರು, ‘ಸಂವಹನದಲ್ಲಿ ದೋಷವಿದ್ದರೆ ವಿದ್ಯಾರ್ಥಿಗಳು ವಿಷಯವನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ. ಪಾಠವನ್ನು ಮುಗಿಸಿದ ಬಳಿಕ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಬೇಡಿ. ಅದರ ಬದಲು ಅವರಿಗೆ ಏನು ಅರ್ಥವಾಗಿದೆಯೋ ಅದನ್ನು ಪಟ್ಟಿ ಮಾಡುವಂತೆ ಸೂಚಿಸಿ. ಇದು ವಿಷಯವನ್ನು ಮನದಟ್ಟು ಮಾಡಲು ನೆರ
ವಾಗುತ್ತದೆ’ ಎಂದು ಸಲಹೆ ನೀಡಿದರು.

ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಎಸ್‌.ಕಾಂತ ಹಾಗೂ ದಯಾನಂದ ಸಾಗರ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಎಲ್‌.ನಾಗೇಶ್‌ ಅವರು ವಿಶೇಷ ಉಪನ್ಯಾಸ ನೀಡಿದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !