ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಣೆ

7

ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಣೆ

Published:
Updated:

ಚಾಮರಾಜನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಜಾಮೀನು ನೀಡಲು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಲಯ ನಿರಾಕರಿಸಿದೆ.

ಯಳಂದೂರು ತಾಲೂಕಿನ ದುಗ್ಗಟ್ಟಿ ಗ್ರಾಮದ ರವಿಕುಮಾರ್ ಎಂಬಾತ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿಯು ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜಿ. ಬಸವರಾಜ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ. ಯೋಗೇಶ್ ವಾದ ಮಂಡಿಸಿದ್ದರು.

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !