‘ರಕ್ತದಾನ ವ್ಯಕ್ತಿತ್ವದ ಭಾಗವಾಗಲಿ’

ಭಾನುವಾರ, ಜೂನ್ 16, 2019
32 °C

‘ರಕ್ತದಾನ ವ್ಯಕ್ತಿತ್ವದ ಭಾಗವಾಗಲಿ’

Published:
Updated:
Prajavani

ಬೆಂಗಳೂರು: ‘ಪ್ರತಿಯೊಬ್ಬ ನಾಗರಿಕರು ರಕ್ತದಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ಪ್ರಜ್ಞಾವಂತಿಕೆಯಕರ್ತವ್ಯ. ರಕ್ತದಾನ ವ್ಯಕ್ತಿತ್ವದ ಭಾಗವಾಗಬೇಕು’ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅಭಿಪ್ರಾಯಪಟ್ಟರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ವಿಶ್ವರಕ್ತದಾನಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಿಂಟೊ ಕಣ್ಣಿನ ಆಸ್ಪತ್ರೆಯ ನಿರ್ದೇಶಕಿ ಡಾ. ಬಿ.ಎಲ್. ಸುಜಾತ ರಾಥೋಡ್, ‘ಸ್ವಯಂಪ್ರೇರಿತ ರಕ್ತದಾನ ಸಮಾಜವನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

ಈ ಬಾರಿಯ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ‘ಸರ್ವರಿಗೂ ಸುರಕ್ಷಿತ ರಕ್ತ’ ಘೋಷಣೆಯೊಂದಿಗೆ ಆಚರಿಸಲಾಯಿತು. 25ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ 16 ಮಂದಿಯನ್ನು ಸನ್ಮಾನಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !