ನೀಲಮ್ಮ ಮೇಟಿ ರಾಜೀನಾಮೆ ನಾಳೆ

7
‘ಪ್ರಜಾವಾಣಿ’ ಕಚೇರಿಗೆ ದೂರವಾಣಿ ಕರೆ ಮಾಡಿ ರಾಜೀನಾಮೆ ಖಚಿತ ಪಡಿಸಿದ ಜಿ.ಪಂ. ಅಧ್ಯಕ್ಷೆ

ನೀಲಮ್ಮ ಮೇಟಿ ರಾಜೀನಾಮೆ ನಾಳೆ

Published:
Updated:

ವಿಜಯಪುರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ ಮೇಟಿ ಸಾಮಾನ್ಯ ಸಭೆಯಲ್ಲೇ ಪ್ರಕಟಿಸಿದಂತೆ, ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

ಗೋವಾದಿಂದ ಬೆಂಗಳೂರಿಗೆ ಮಂಗಳವಾರ ಸಂಜೆ ಬರಲಿರುವ ನೀಲಮ್ಮ ಮೇಟಿ, ಸಚಿವ ಶಿವಾನಂದ ಪಾಟೀಲ, ಶಾಸಕರಾದ ಎಂ.ಬಿ.ಪಾಟೀಲ, ಯಶವಂತರಾಯಗೌಡ ಪಾಟೀಲ, ಮಾಜಿ ಸಚಿವ ಸಿ.ಎಸ್‌.ನಾಡಗೌಡರನ್ನು ಭೇಟಿಯಾಗಿ ಮತ್ತೊಮ್ಮೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಪತಿ ಸಿದ್ದಣ್ಣ ಮೇಟಿ ಅವರಿಗೆ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡುವಂತೆ ಲಾಬಿ ನಡೆಸಲಿದ್ದಾರೆ ಎಂಬುದು ಗೊತ್ತಾಗಿದೆ.

‘ಗುರುವಾರ ರಾಜೀನಾಮೆ ಸಲ್ಲಿಸಲು ಸಿದ್ಧತೆ ನಡೆಸಿಕೊಂಡಿರುವೆ. ಜಿಲ್ಲಾ ಪಂಚಾಯ್ತಿಯ ಹಿರಿಯ ಸದಸ್ಯರಾದ ಉಮೇಶ ಕೋಳಕೂರ, ಶಿವಯೋಗೆಪ್ಪ ನೇದಲಗಿ ಸೇರಿದಂತೆ ನಾಲ್ಕೈದು ಸದಸ್ಯರನ್ನು ಬರುವಂತೆ ಆಹ್ವಾನ ನೀಡಿರುವೆ. ಅವರು ಒಪ್ಪಿಕೊಂಡಿದ್ದಾರೆ. ಈ ಎಲ್ಲರ ಜತೆ ತೆರಳಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸುವೆ’ ಎಂದು ನೀಲಮ್ಮ ಮೇಟಿ ‘ಪ್ರಜಾವಾಣಿ’ ಕಚೇರಿಗೆ ದೂರವಾಣಿ ಕರೆ ಮಾಡಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !