ಫಲಿತಾಂಶ ಕುಸಿತ; ಗೃಹ ಸಚಿವರಿಗೆ ಬೇಸರ

ಬುಧವಾರ, ಜೂನ್ 19, 2019
23 °C

ಫಲಿತಾಂಶ ಕುಸಿತ; ಗೃಹ ಸಚಿವರಿಗೆ ಬೇಸರ

Published:
Updated:
Prajavani

ವಿಜಯಪುರ: ‘2018–19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ 25ನೇ ಸ್ಥಾನಕ್ಕೆ ಕುಸಿದಿರುವುದು ತುಂಬಾ ಬೇಸರ ತಂದಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಗ್ರಾಮೀಣ ವಲಯದ ಶೈಕ್ಷಣಿಕ ಪ್ರಗತಿಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಎನ್‌.ಹುರುಳಿ ಬಳಿ ವಿವರ ಪಡೆದು ಮಾತನಾಡಿದರು.

‘ಜಿಲ್ಲೆಯ ಫಲಿತಾಂಶ ಸುಧಾರಣೆಗಾಗಿ 2014ರಿಂದ ಪ್ರತಿ ವರ್ಷ ಕೈಗೊಂಡ ಕ್ರಮಗಳಿಂದಾಗಿ ಕಳೆದ ವರ್ಷ 9ನೇ ಸ್ಥಾನದ ಸಾಧನೆ ಮಾಡಿತ್ತು’ ಎಂದರು.

‘ಫಲಿತಾಂಶ ಸುಧಾರಣೆ, ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಕುರಿತು ಈ ಹಿಂದೆ ಜರುಗಿಸಿದ ಕ್ರಮಗಳಿಗೆ ಕಳೆದ ವರ್ಷ ಶೈಕ್ಷಣಿಕ ಇಲಾಖೆ ಅಧಿಕಾರಿಗಳು ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಬೇಕಿತ್ತು. ಅಧಿಕಾರಿಗಳ ಉದಾಸೀನದಿಂದ ಜಿಲ್ಲೆ ಕಳಪೆ ಫಲಿತಾಂಶ ಕಾಣುವಂತಾಗಿದೆ. ಇದರಿಂದ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ?’ ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲೆಯ ಶೈಕ್ಷಣಿಕ ವಲಯಗಳಲ್ಲಿ ಕಳೆದ ಬಾರಿ ಮೂರನೇ ಸ್ಥಾನದಲ್ಲಿದ್ದ ವಿಜಯಪುರ ಗ್ರಾಮೀಣ ವಲಯ ಈ ಬಾರಿ ಪ್ರಥಮ ಸ್ಥಾನದಲ್ಲಿದೆ. ಪರೀಕ್ಷೆಗೆ ಹಾಜರಾದ 5,105 ವಿದ್ಯಾರ್ಥಿಗಳ ಪೈಕಿ 4,184 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ 1,613 ಮಕ್ಕಳು ಪ್ರಥಮ ದರ್ಜೆ, 1,641 ಮಕ್ಕಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. 5 ಸರ್ಕಾರಿ, ಒಂದು ಅನುದಾನಿತ ಮತ್ತು ಮೂರು ಅನುದಾನ ರಹಿತ ಒಟ್ಟು 9 ಶಾಲೆಗಳು ಶೇ100 ರಷ್ಟು ಫಲಿತಾಂಶ ಪಡೆದುಕೊಂಡಿವೆ. ಗ್ರಾಮೀಣ ವಲಯದ ಯಾವುದೇ ಶಾಲೆಯಲ್ಲಿ ಶೂನ್ಯ ಫಲಿತಾಂಶವಿಲ್ಲ’ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎನ್.ಹುರುಳಿ ಸಚಿವರಿಗೆ ವಿವರಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !