ಭಾನುವಾರ, ಸೆಪ್ಟೆಂಬರ್ 26, 2021
21 °C

ರೇವಾ ವಿವಿ; ಮತದಾನ ಜಾಗೃತಿಗೆ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಯಲಹಂಕದ ರೇವಾ ವಿಶ್ವವಿದ್ಯಾಲಯದ ಮತದಾನ ಸಾಕ್ಷರತಾ ಸಂಘಟನೆಯು ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನದ ಮೊದಲ ಹಂತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಿತು.

ಜಾಗೃತಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರವನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಲ್ಲಿ ಶೇ 85ರಷ್ಟು ಮತದಾನವಾಗುತ್ತಿದ್ದು, ಈ ಅಭಿಯಾನದಿಂದ ಶೇ 100ರಷ್ಟು ಮತದಾನ ಆಗುವಂತೆ ಮಾಡುವ ಗುರಿಯಿಂದ 11 ದಿನಗಳ ಕಾಲ 800 ವಿದ್ಯಾರ್ಥಿಗಳು ಮತ್ತು 200 ಸಿಬ್ಬಂದಿ, ಮನೆಮನೆಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೆರವಾಗಿದ್ದರು. ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್, ‘ಉತ್ತಮ ಸಮಾಜ ನಿರ್ಮಾಣ ಆಗಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮವಾಗಿರಬೇಕು. ಎಲ್ಲರೂ ಮತದಾನ ಮಾಡಿದರೆ ಒಳ್ಳೆಯ ಅಭ್ಯರ್ಥಿಆಯ್ಕೆ ಮಾಡಬಹುದು ಎಂದರು.

ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ‘ಇದು ಅಭಿಯಾನದ ಮೊದಲ ಹಂತವಾಗಿದ್ದು, ಅದರ ಭಾಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮನೆಮನೆಗೆ ತೆರಳಿ ಗೂಗಲ್ ಸಹಾಯದಿಂದ ಪ್ರಶ್ನೆಗಳನ್ನು ರೂಪಿಸಿ, 1 ಲಕ್ಷ ನಿವಾಸಿಗಳ ಭೇಟಿ ಮಾಡಿ ವರದಿ ಸಿದ್ದಪಡಿಸಿದ್ದಾರೆ. ಇದನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲೇ 2ನೇ ಹಂತದ ಜಾಗೃತಿ ಅಭಿಯಾನ ಆರಂಭವಾಗಲಿದೆ’ ಎಂದರು. ರೇವಾ ವಿವಿ ಕುಲಪತಿ ಡಾ.ಎಸ್.ವೈ.ಕುಲಕರ್ಣಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.