ಅಪಘಾತ; ಸಿನಿಮಾ ಕಾರ್ಮಿಕ ಸಾವು

ಶುಕ್ರವಾರ, ಜೂನ್ 21, 2019
22 °C

ಅಪಘಾತ; ಸಿನಿಮಾ ಕಾರ್ಮಿಕ ಸಾವು

Published:
Updated:

ಬೆಂಗಳೂರು: ಚಿಕ್ಕಜಾಲ ಸಮೀಪ ಕೆ. ನಾರಾಯಣಪುರ ಜಂಕ್ಷನ್‌ನಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ದಿಗ್ವಿಜಯ್ (24) ಎಂಬುವರು ಮೃತಪಟ್ಟಿದ್ದಾರೆ.

ಎಚ್‌ಎಎಲ್ ನಿವಾಸಿ ಆಗಿದ್ದ ದಿಗ್ವಿಜಯ್, ಸಿನಿಮಾ ನಿರ್ಮಾಣ ತಂಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ಅವರ ಸ್ನೇಹಿತರಾದ ಯಲಹಂಕದ ರೈನಿಲ್ ಮತ್ತು ಅಟ್ಟೂರು ಲೇಔಟ್‌ನ ಲಿಖಿತ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮೂವರು ಸ್ನೇಹಿತರು, ಸಿನಿಮಾ ನಿರ್ಮಾಣ ತಂಡದಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ನಾಗವಾರ ಬಳಿಯ ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ಒಂದೇ ಬೈಕ್‌ನಲ್ಲಿ ಮನೆಯತ್ತ ತೆರಳುತ್ತಿದ್ದರು. ಕೆ.ನಾರಾಯಣಪುರ ಜಂಕ್ಷನ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿದ್ದ ಬೈಕ್, ಫುಟ್‌ಪಾತ್‌ ಮಾರ್ಗದ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿಬಿದ್ದಿತ್ತು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ಹೇಳಿದರು.

‘ರೈನಿಲ್ ಹಾಗೂ ಲಿಖಿತ್, ಫುಟ್‌ಪಾತ್ ಮೇಲೆ ಬಿದ್ದು ನರಳುತ್ತಿದ್ದರು. ದಿಗ್ವಿಜಯ್, ರಸ್ತೆಯಲ್ಲಿ ಬಿದ್ದಿದ್ದರು. ಅದೇ ಮಾರ್ಗವಾಗಿ ಹೊರಟಿದ್ದ ಟ್ರಕ್‌ ಒಂದರ ಚಕ್ರಗಳು ದಿಗ್ವಿಜಯ್ ಅವರ ಎದೆ ಮೇಲೆ ಹರಿದು ಹೋಗಿದ್ದವು. ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದರು.

‘ಟ್ರಕ್ ಯಾವುದು ಗೊತ್ತಾಗುತ್ತಿಲ್ಲ. ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !