ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

ಮಂಗಳವಾರ, ಜೂನ್ 18, 2019
23 °C

ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

Published:
Updated:
Prajavani

ಬೆಂಗಳೂರು: ಕಗ್ಗಲೀಪುರದಲ್ಲಿ ಭಾನುವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ ಸವಾರ, ಪತ್ರಿಕಾ ವಿತರಕ ಕೂಡಾ ಆಗಿರುವ ಭೈರಸಂದ್ರ ನಿವಾಸಿ ಜೈಕುಮಾರ್‌ (32) ಮೃತಪಟ್ಟಿದ್ದಾರೆ.

ಸೋಮನಹಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಮ್ಮ ಮನೆಗೆ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ,‌ ಹೆಚ್ಚಿನ ಚಿಕಿತ್ಸೆಗೆ ವಿ.ವಿ. ಪುರನಲ್ಲಿರುವ ಮೆಡಿಕೇರ್‌ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಲಿಲ್ಲ. ಸೋಮವಾರ ನಸುಕಿನಲ್ಲಿ ಸಾವು ಸಂಭವಿಸಿದೆ.

ಮೃತರಿಗೆ ಪತ್ನಿ ಮತ್ತು ಒಂದೂವರೆ ವರ್ಷದ ಗಂಡು ಮಗುವಿದೆ. ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ: ಇಬ್ಬರ ದುರ್ಮರಣ
ಬೆಂಗಳೂರು:
ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಖಾಸಗಿ ಕಂಪನಿಯ ನೌಕರ ಮತ್ತು ಸೆಕ್ಯೂರಿಟಿ ಗಾರ್ಡ್‌ ಮೃತಪಟ್ಟಿದ್ದಾರೆ.

ರಾಮಮೂರ್ತಿ ನಗರ ಮುಖ್ಯರಸ್ತೆಯಲ್ಲಿ ಹುಂಡೈ ಶೋ ರೋಂ ಬಳಿ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ, ನಾಗವಾರಪಾಳ್ಯ ನಿವಾಸಿ ಪೂವರಸನ್‌ (22) ಮೃತಪಟ್ಟಿದ್ದಾರೆ. ತಮಿಳುನಾಡು ನಿವಾಸಿಯಾಗಿದ್ದ ಪೂವರಸನ್‌, ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆ.ಆರ್‌. ಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಗೇರಿ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸ್ಥಳೀಯ ನಿವಾಸಿ, ಸೆಕ್ಯೂರಿಟಿ ಗಾರ್ಡ್‌ ಕೃಷ್ಣಪ್ಪ (42) ಎಂಬವರು ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ. ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !