ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಜಾರಿಗೆ ಆಗ್ರಹ

7

ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಜಾರಿಗೆ ಆಗ್ರಹ

Published:
Updated:
Deccan Herald

ಬೆಂಗಳೂರು: ‘ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರ್ಕಾರ ತಡ ಮಾಡುತ್ತಿದೆ’ ಎಂದು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವ್ಯಾಪಾರಿಗಳು ಆರೋಪಿಸಿದರು.

ಬೀದಿ ಬದಿ ವ್ಯಾಪಾರಿಗಳ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಅರವಿಂದ ಸಿಂಗ್‌ ಅವರ ಸಮ್ಮುಖದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರಾಜ್ಯದ ವ್ಯಾಪಾರಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

‘ಗುರುತಿನ ಚೀಟಿ ಕೊಟ್ಟಿಲ್ಲ. ರಸ್ತೆ ಬದಿಯಲ್ಲಿ ನಿಂತು ವ್ಯಾಪಾರ ಮಾಡಲು ಬಿಡುತ್ತಿಲ್ಲ. ಮಳೆಗಾಲದಲ್ಲಿ ನಮಗೆ ನೆಲೆ ಇಲ್ಲದಂತಾಗಿದೆ’ ಎಂದು ಮಂಡ್ಯ ಜಿಲ್ಲೆಯ ವ್ಯಾಪಾರಿಯೊಬ್ಬರು ತಮ್ಮ ಅಳಲು ತೋಡಿಕೊಂಡರು.

‘ನಗರ ವ್ಯಾಪಾರಿಗಳ ಸಮಿತಿಯಲ್ಲಿ (ಟಿವಿಸಿ) ಬೀದಿ ಬದಿ ಮಾರಾಟ ಮಾಡುವವರು ಯಾರೂ ಇಲ್ಲ. ನಮ್ಮ ಸಮಸ್ಯೆಗಳನ್ನು ಅವರು ಕೇಳುತ್ತಿಲ್ಲ. ಕೆಲವು ಕಡೆ ಟಿವಿಸಿ ಇನ್ನೂ ರಚನೆಯಾಗಿಲ್ಲ. ನಮ್ಮ ಭಾಗದ 2000 ಮಂದಿಗೆ ಗುರುತಿನ ಚೀಟಿಯೇ ಸಿಕ್ಕಿಲ್ಲ’ ಎಂದು ಗದಗದ ಸದಸ್ಯರೊಬ್ಬರು ದೂರಿದರು.

ಯೋಜನಾ ಅಧಿಕಾರಿ ನಾಗರಾಜ್‌, ‘271 ನಗರ ಸ್ಥಳೀಯ ಸಮಿತಿಗಳನ್ನು ರಚಿಸಲಾಗಿದೆ. ಇದರಲ್ಲಿ 214 ಟಿವಿಸಿಗಳನ್ನು ಸ್ಥಾಪನೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಬಹುತೇಕ ವ್ಯಾಪಾರಿಗಳಿಗೆ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಯನ್ನೂ ಕೊಡಲಾಗಿದೆ. ಇದರಲ್ಲಿ ಸಂಪೂರ್ಣ ಮಾಹಿತಿ ಇರುವ ಚಿಪ್‌ ಕೂಡ ಅಳವಡಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಅರವಿಂದ ಸಿಂಗ್‌,‘ಕೇಂದ್ರ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೊಳಿಸಿರುವ ಬೀದಿ ಬದಿ ವ್ಯಾಪಾರಿಗಳ ಕಾಯ್ದೆಯನ್ನು ಕರ್ನಾಟಕದಲ್ಲಿ ಇನ್ನೂ ಅನುಷ್ಠಾನಕ್ಕೆ ತರದೇ ಇರುವುದು ದುರಂತ. ಇದಕ್ಕಾಗಿ ನಾವು ಒಗ್ಗಟ್ಟಿನಿಂದ ಹೋರಾಡಬೇಕಿದೆ’ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !