ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಹತ್ಯೆ

7

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಹತ್ಯೆ

Published:
Updated:

ಬೆಂಗಳೂರು: ಬ್ಯಾಡರಹಳ್ಳಿ ಬಳಿಯ ಮಂಗನಹಳ್ಳಿ ಕ್ರಾಸ್ ಬಸ್ ನಿಲ್ದಾಣ ಸಮೀಪ ರೌಡಿ ಗುರುಮೂರ್ತಿ ಅಲಿಯಾಸ್ ಸ್ಕೂಪಿ (29) ಎಂಬಾತನನ್ನು ಸೋಮವಾರ ನಸುಕಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಚಿಕ್ಕಗೊಲ್ಲರಹಟ್ಟಿ ನಿವಾಸಿಯಾದ ಗುರುಮೂರ್ತಿ, ಮದ್ಯ ಸೇವಿಸಲು ಭಾನುವಾರ ರಾತ್ರಿ ತನ್ನ ಸ್ನೇಹಿತರ ಜೊತೆಯಲ್ಲಿ ಮನೆಯಿಂದ ಹೊರಗೆ ಹೋಗಿದ್ದ. ಬೆಳಿಗ್ಗೆ ಆತನ ಶವ ಕಂಡ ಸ್ಥಳೀಯರು, ಠಾಣೆಗೆ ಮಾಹಿತಿ ನೀಡಿದ್ದರು. ಸ್ನೇಹಿತರೇ ಆತನನ್ನು ಕೊಲೆ ಮಾಡಿರುವ ಅನುಮಾನವಿದ್ದು, ಸದ್ಯ ಅವರೆಲ್ಲ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

‘ಡಿಪ್ಲೊಮಾ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಗುರುಮೂರ್ತಿ, ಅಪರಾಧ ಕೃತ್ಯ ಎಸಗಲಾರಂಭಿಸಿದ್ದ. ಸುಂಕದಕಟ್ಟೆಯ ಕೆಲವು ರೌಡಿಗಳ ಜೊತೆ ಒಡನಾಟ ಇಟ್ಟುಕೊಂಡಿದ್ದ ಆತ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ’ ಎಂದರು.

‘ಒಂದೂವರೆ ತಿಂಗಳ ಹಿಂದಷ್ಟೇ ಆತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ ಆತ, ಪುನಃ ಕೃತ್ಯ ಎಸಗಲಾರಂಭಿಸಿದ್ದ. ಹಳೇ ವೈಷಮ್ಯದಿಂದಲೇ ಈ ಕೊಲೆ ನಡೆದಿರುವ ಬಗ್ಗೆ ಸಂಶಯವಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !