ಆರ್‌ಟಿಇ ಅಡಿ ಅರ್ಜಿ ಸಲ್ಲಿಕೆ ಪ್ರಮಾಣ ಕುಸಿತ?

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಆರ್‌ಟಿಇ ಅಡಿ ಅರ್ಜಿ ಸಲ್ಲಿಕೆ ಪ್ರಮಾಣ ಕುಸಿತ?

Published:
Updated:

ಬೆಂಗಳೂರು: ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಅವಕಾಶ ವಂಚಿತ ಕುಟುಂಬಗಳ ಪೋಷಕರು ಆರ್‌ಟಿಇ ಅಡಿ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ.

ಅರ್ಜಿ ಹಾಕಲು ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ನೀಡಿದ ದಿನದಿಂದ ಇಲ್ಲಿಯವರೆಗೆ ಕೇವಲ 16,898 ಅರ್ಜಿಗಳು ಸಲ್ಲಿಕೆ ಆಗಿವೆ. ಆದರೆ, ಈ ಹಿಂದಿನ ವರ್ಷಗಳಲ್ಲಿ ಅರ್ಜಿ ಆಹ್ವಾನಿಸಿದ ಒಂದೆರಡು ವಾರಗಳಲ್ಲಿ 50 ರಿಂದ 60 ಸಾವಿರ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದವು.

ಈ ಮಧ್ಯೆ  ಆರ್‌ಟಿಇ ಅಡಿ ಅರ್ಜಿ ಸಲ್ಲಿಸಲು ಇರುವ ಅವಕಾಶವನ್ನು ಇದೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಈ ಮೊದಲು ಇದೇ 15 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಈಗ ಆರ್‌ಟಿಇ ಅಡಿ ನೆರೆ ಹೊರೆ ಶಾಲೆಗಳಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗುತ್ತದೆ, ಸರ್ಕಾರಿ ಅಥವಾ ಅನುದಾನಿತ ಶಾಲೆಗಳು ಇದ್ದರೆ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂಬ ನಿಯಮವನ್ನು ಜಾರಿಗೆ ತಂದಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪೋಷಕರ ಕಡೆಯಿಂದ ಅರ್ಜಿ ಸಲ್ಲಿಸಲಾಗಿದೆ. ತೀರ್ಪಿಗಾಗಿ ಪೋಷಕರು ಕಾಯುತ್ತಿದ್ದಾರೆ. ನ್ಯಾಯಾಲಯ ತೀರ್ಪು ತಮ್ಮ ಪರವಾಗಿ ಬಂದರೆ, ಬಳಿಕ ಅರ್ಜಿ ಸಲ್ಲಿಸುತ್ತಾರೆ ಎಂದು ಆರ್‌ಟಿಇ ಕಾರ್ಯಪಡೆಯ ಸಂಯೋಜಕ ನಾಗಸಿಂಹರಾವ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕಳೆದ ವರ್ಷ ಅನುದಾನಿತ ಶಾಲೆಗಳಿಗೆ ಪ್ರವೇಶ ಸಿಕ್ಕರೂ ಸುಮಾರು 10 ಸಾವಿರ ವಿದ್ಯಾರ್ಥಿಗಳು ದಾಖಲಾಗಲಿಲ್ಲ. ಆಷ್ಟು ಸೀಟುಗಳು ಭರ್ತಿ ಆಗದೇ ಉಳಿದವು. ಅನುದಾನಿತ ಶಾಲೆಗಳಲ್ಲಿ ಗುಣಮಟ್ಟ ಮತ್ತು ವ್ಯವಸ್ಥೆ ಚೆನ್ನಾಗಿರುವುದಿಲ್ಲ ಎಂಬ ಕಾರಣಕ್ಕೆ ಅರ್ಜಿ ಹಾಕುವುದಿಲ್ಲ. ತಮ್ಮ ಮಕ್ಕಳಿಗೆ ಪ್ರತಿಷ್ಠಿತ ‘ಹೈ–ಫೈ’ ಖಾಸಗಿ ಶಾಲೆಗಳಲ್ಲೇ ಪ್ರವೇಶ ಸಿಗಬೇಕು ಎಂಬ ಅಪೇಕ್ಷೆ ಇರುತ್ತದೆ. ಅದರಲ್ಲಿ ತಪ್ಪಿಲ್ಲ ಎಂದರು.

‘ಹೈಕೋರ್ಟ್‌ನಲ್ಲಿ ನಮ್ಮ ಪರವಾಗಿ ನ್ಯಾಯ ಸಿಗದೇ ಇದ್ದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ಅನುದಾನಿತ ಶಾಲೆಗಳ ವಸ್ತುಸ್ಥಿತಿಯನ್ನು ಮುಚ್ಚಿಟ್ಟು ಪ್ರವೇಶ ನೀಡಲಾಗುತ್ತಿದೆ. ಇದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ’ ಎಂದೂ ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 3

  Angry

Comments:

0 comments

Write the first review for this !