‘ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ನೀಡಿ’

ಮಂಗಳವಾರ, ಜೂನ್ 18, 2019
24 °C
ಬಾವಿ ಸ್ವಚ್ಛಗೊಳಿಸುವಾಗ ಮೃತಪಟ್ಟಿದ್ದ ಕಾರ್ಮಿಕರು

‘ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ನೀಡಿ’

Published:
Updated:
Prajavani

ಬೆಂಗಳೂರು: ಕೆ.ಜಿ. ಹಳ್ಳಿಯ ಟ್ಯಾನರಿ ರಸ್ತೆಯ ಬಳಿ ಹಳೇ ಬಾವಿ ಶುಚಿಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಸಾವಿಗೀಡಾಗಿದ್ದ ಇಬ್ಬರು ಕಾರ್ಮಿಕರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಮತ್ತು ಕುಟುಂಬಗಳ ತಲಾ ಒಬ್ಬರಿಗೆ ಉದ್ಯೋಗ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಸೂಚಿಸಿದರು. 

ಗಫೂರ್‌ ಪಾಷಾ ಮತ್ತು ಅಫ್ತಾಬ್‌ ಪಾಷಾ ಎಂಬುವರು ಏಪ್ರಿಲ್‌ 27ರಂದು ಸಾವಿಗೀಡಾಗಿದ್ದರು. ಕೂಲಿ ಕಾರ್ಮಿಕರಾಗಿದ್ದ ಅಫ್ತಾಬ್‌ ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಗಫೂರ್, ಟ್ಯಾನರಿ ರಸ್ತೆಯಲ್ಲಿರುವ ‘ಬಿಸ್ಮಿಲ್ಲಾ ಟೀ’ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆ ಅಂಗಡಿಗೆ ಹೊಂದಿಕೊಂಡಿರುವ ಹಳೇ ಬಾವಿಯನ್ನು ಸ್ವಚ್ಛಗೊಳಿಸಲು ಇಳಿದಾಗ ಇಬ್ಬರೂ ಸಾವಿಗೀಡಾಗಿದ್ದರು. ಜಗದೀಶ ಹಿರೇಮನಿ ಈ ಸ್ಥಳಕ್ಕೆ ಗುರುವಾರ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಈಗ ಬಾವಿಯನ್ನು ಮುಚ್ಚಲಾಗಿದೆ. ಘಟನೆ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಚೆಕ್‌ ವಿತರಣೆ: ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಂಡಾಳಮ್ಮ ಎಂಬುವರು ಕಳೆದ ಏಪ್ರಿಲ್‌ 29ರಂದು ದಾಲ್ಮಿಯಾ ಜಂಕ್ಷನ್‌ ಹತ್ತಿರ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಅವರ ಮಗ ದಕ್ಷಿಣಾಮೂರ್ತಿ
ಯವರಿಗೆ ಜಗದೀಶ ಅವರು ₹10 ಲಕ್ಷ ಮೊತ್ತದ ಚೆಕ್‌ ವಿತರಿಸಿದರು. 

ಅಂಡಾಳಮ್ಮ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವಂತೆ ಬಿಬಿಎಂಪಿ ದಕ್ಷಿಣ ವಲಯದ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !