3

‘ವ್ಯವಸ್ಥೆ ಬದಲಾವಣೆಗೆ ನಾಗರಿಕರ ಸಹಭಾಗಿತ್ವ ಅಗತ್ಯ’‌

Published:
Updated:

ಬೆಂಗಳೂರು: ‘ನಾಗರಿಕರು ಅಧಿಕಾರಿ ಮತ್ತು ರಾಜಕಾರಣಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಕೈಜೋಡಿಸಿದಾಗ ಮಾತ್ರ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ’ ಎಂದು ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು.

ನಗರದಲ್ಲಿ ಸಮತಾ ಲೇಡಿಸ್ ಕ್ಲಬ್ ಮತ್ತು ಅಖಿಲ ಭಾರತ ಗ್ರಾಹಕರ ರಕ್ಷಣಾ ವೇದಿಕೆ ಮಂಗಳವಾರ ಆಯೋಜಿಸಿದ್ದ ‘ಮಹಿಳಾ ಮೀಸಲಾತಿ ಯಶಸ್ವಿಯಾಗಿ ಜಾರಿಗೆ ಬಂದಿದೆಯೇ.? ಮಹಿಳೆಯರು ಮೀಸಲಾತಿ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಹುರಿದುಂಬಿಸಲು ತೆಗೆದುಕೊಳ್ಳಬೇಕಾದ ಕ್ರಮಗಳು’ ಕುರಿತ ಚರ್ಚಾಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯದ 224 ಕ್ಷೇತ್ರಗಳ ‍ಪೈಕಿ ಕೇವಲ 8 ಜನ ಮಹಿಳೆಯರು ಇದ್ದೇವೆ. ಮಹಿಳಾ ಸಹ ಭಾಗಿತ್ವ ಕೇವಲ ಶೇ 50 ರಷ್ಟು ಮಾತ್ರ ಇದೆ. ಆದರೆ, ಸಮಸ್ಯೆಗಳು ಹೆಚ್ಚಾಗಿವೆ. ಹಾಗಾಗಿ ಮಹಿಳಾ ಮೀಸಲಾತಿ ಬಗ್ಗೆ ಜಾಗೃತಿ ವಹಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿಗಾಗಿಯೇ ಶ್ರಮಿಸುವೆ. ನಿಮ್ಮ ದೂರು, ಸಮಸ್ಯೆಗಳಿಗೆ ದನಿಯಾಗಿ ದುಡಿಯುವೆ’ ಎಂದೂ ಅವರು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಹಣಕಾಸು ನಿಗಮದ ಉಪಮಹಾಪ್ರಬಂಧಕಿ ರೂಪಾ.ಆರ್‌, ‘ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಮಹಿಳೆಯರ ಸಹಭಾಗಿತ್ವ ಅಗತ್ಯ. ಮಹಿಳೆಯರಿಗೆ ಪೂರ್ಣ ಪ್ರಮಾಣದ ಮೀಸಲಾತಿ ಸಿಗುತ್ತಿಲ್ಲ. ವಿಧಾನ ಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಇನ್ನೂ ಜಾರಿಯಾಗಿಲ್ಲ. ಮಹಿಳಾ ಸಂಕುಲದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತರಾಗಲೇಬೇಕು’ ಎಂದರು.

‘ಗ್ರಾಮೀಣ ಭಾಗದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಹಾಗಾಗಿ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದೂ ಹೇಳಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !