ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬುಧವಾರ, ಜೂನ್ 19, 2019
28 °C

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Published:
Updated:
Prajavani

ವಿಜಯಪುರ: ನಗರದ ಆಂಬಿಷನ್ ಫಾರ್ ಮ್ಯಾಥ್ಸ್ ಹಾಗೂ ಫಿಸಿಕ್ಸ್ ಅಕಾಡೆಮಿಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

ಡಾ.ವಿಜಯಲಕ್ಷ್ಮಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಜೀವನದ ಮಹತ್ವದ ಘಟ್ಟ. ವೃತ್ತಿ ಬದುಕನ್ನು ನಿರ್ಧರಿಸುವ ಪ್ರಮುಖ ಘಟ್ಟವಾಗಿರುವ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಓದಿನಲ್ಲಿ ವಿನಿಯೋಗಿಸಬೇಕು. ಜ್ಞಾನ ಸಂಪಾದನೆಗೆ ಪ್ರಥಮ ಆದ್ಯತೆ ನೀಡಬೇಕು‘ ಎಂದು ಸಲಹೆ ನೀಡಿದರು.

ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ದೀಪಕ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರೂಪಾ ಹತ್ತಿರಕಿಹಾಳ ಇದ್ದರು. ಕಾರ್ಯಕ್ರಮದಲ್ಲಿ ಪಿ.ಯು.ಸಿ ಮತ್ತು ಜೆಇಇ ಪರೀಕ್ಷೆಯಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕ ಪಡೆದ ಕೃತಿಕಾ ಸಾಬಣವರ, ಶ್ರೀನಿಧಿ ಕುಲಕರ್ಣಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಹರ್ಷ ಕಲ್ಯಾಣಶೆಟ್ಟಿ, ಆಕಾಶ ಸೊನ್ನಗಿ, ಸ್ವಯಂ ಸಾಬಣವರ, ಸಮೀರ್ ಗೀರಗಾಂವ, ರೋಹಿತ ಹತ್ತಿ, ಸೃಷ್ಟಿ, ನಂದಿನಿ ಚೌಕಿಮಠ ಅವರನ್ನು ಗೌರವಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !