ಸವಿತಾ ಮಹರ್ಷಿ ಜಯಂತಿ ಆಚರಿಸಲು ಆಗ್ರಹ

7

ಸವಿತಾ ಮಹರ್ಷಿ ಜಯಂತಿ ಆಚರಿಸಲು ಆಗ್ರಹ

Published:
Updated:

ಬೆಂಗಳೂರು‌: ‘ರಾಜ್ಯ ಸರ್ಕಾರದ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಆಚರಿಸುವಂತೆ ಸವಿತಾ ಮಹರ್ಷಿ ಜಯಂತಿಯನ್ನೂ ಆಚರಿಸಬೇಕು’ ಎಂದು ರಾಜ್ಯ ಸವಿತಾ ಸಮಾಜ ಆಗ್ರಹಿಸಿದೆ. 

ನಗರದದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಘಟಕದ ಅಧ್ಯಕ್ಷ ಯು. ಕೃಷ್ಣಮೂರ್ತಿ, ‘24 ಉಪ ಸಮುದಾಯಗಳನ್ನು ಹೊಂದಿರುವ ಸವಿತಾ ಸಮಾಜದ ಬೇಡಿಕೆಯನ್ನು ಪರಿಗಣಿಸದಿರುವುದು ಸರ್ಕಾರದ ಬೇಜವಾಬ್ದಾರಿ ತೋರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಈ ಬಗ್ಗೆ ಸರ್ಕಾರ ಕೂಡಲೇ ಸವಿತಾ ಮಹರ್ಷಿ ಜಯಂತಿ ಆಚರಿಸುವುದಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !