ಅಹಿಂಸಾ ವಿರುದ್ಧ ಆಕ್ರೋಶ

ಭಾನುವಾರ, ಜೂನ್ 16, 2019
32 °C

ಅಹಿಂಸಾ ವಿರುದ್ಧ ಆಕ್ರೋಶ

Published:
Updated:

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೌಕರರು ಅಧ್ಯಕ್ಷರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿಕೆ ನೀಡಿರುವ ‘ಅಹಿಂಸಾ’ ಮುಖಂಡರ ವಿರುದ್ಧ ಎಸ್‌ಸಿ/ಎಸ್‌ಟಿ ಪರಿಶಿಷ್ಟ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

‘ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪ್ರತಿವರ್ಷ ನಿರ್ದಿಷ್ಟ ಮೊತ್ತ ನೀಡುತ್ತಿದ್ದೇವೆ. ಅದನ್ನು ಈ ವರ್ಷದಿಂದ ನಿಲ್ಲಿಸುತ್ತೇವೆ. ಈವರೆಗೆ ನೀಡಿರುವ ₹25 ಕೋಟಿಗೂ ಹೆಚ್ಚು ಮೊತ್ತವನ್ನು ಎಸ್‌ಸಿ/ಎಸ್‌ಟಿ ಅಧಿಕಾರಿಗಳಿಗೆ ಹಿಂತಿರುಗಿಸಲಿ. ಪ್ರತ್ಯೇಕ ಸಂಘ ಸ್ಥಾಪಿಸಿಕೊಳ್ಳುತ್ತೇವೆ’ ಎಂದು ಸಮಿತಿಯ ಕಾನೂನು ಸಲಹೆಗಾರ ಡಿ.ಚಂದ್ರಶೇಖರಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸುಪ್ರೀಂ’ ತೀರ್ಪಿನಂತೆ ಇದೇ 15ರೊಳಗೆ ಕಾಯ್ದೆ ಅನುಷ್ಠಾನವಾಗದಿದ್ದರೆ ದೌರ್ಜನ್ಯ ತಡೆ ಕಾಯ್ದೆಯಡಿ ದಲಿತ ವಿರೋಧಿ ಅಧಿಕಾರಿಗಳು, ನೌಕರರನ್ನು ಜೈಲಿಗೆ ಕಳುಹಿಸುವ ಹೋರಾಟಕ್ಕೆ ಸಿದ್ಧರಾಗಿದ್ದೇವೆ ಎಂದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !