ಜಿಂದಾಲ್‌ಗೆ ಭೂಮಿ: ಮರುಪರಿಶೀಲನೆ?

ಶುಕ್ರವಾರ, ಜೂನ್ 21, 2019
24 °C
ಸಂಪುಟ ಉಪಸಮಿತಿ ರಚನೆ ಸಾಧ್ಯತೆ * ಡಿಸಿಎಂ, ಜಾರ್ಜ್‌ ಜೊತೆ ಸಿ.ಎಂ ಸಭೆ

ಜಿಂದಾಲ್‌ಗೆ ಭೂಮಿ: ಮರುಪರಿಶೀಲನೆ?

Published:
Updated:

ಬೆಂಗಳೂರು: ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಿಕೊಡುವ ಸರ್ಕಾರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಈ ತೀರ್ಮಾನದ ಮರು ಪರಿಶೀಲನೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.

ಭೂಮಿ ಮಾರಾಟದ ವಿವಾದಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಮತ್ತು ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಜಿಂದಾಲ್‌ಗೆ ಭೂಮಿ ಮಾರಾಟ ಮಾಡುವ ವಿಷಯದ ಕುರಿತು ಇಂದು ಪರಮೇಶ್ವರ ಹಾಗೂ ಜಾರ್ಜ್‌ ಜತೆ ಚರ್ಚಿಸಿದ್ದೇನೆ. ತೀರ್ಮಾನ ಮರುಪರಿಶೀಲನೆ ಮಾಡಲು ಸಂಪುಟ ಸಭೆಗೆ ಪುನಃ ಕಡತ ಮಂಡಿಸುವಂತೆ ಸೂಚಿಸಿದ್ದೇನೆ’ ಎಂದಿದ್ದಾರೆ.

ಜಮೀನು ಮಾರಾಟದಿಂದ ಆಗುವ ಸಾಧಕ– ಬಾಧಕಗಳ ಬಗ್ಗೆ ಪರಾಮರ್ಶೆ ನಡೆಸಲು ಸಂಪುಟ ಉಪಸಮಿತಿಯೊಂದನ್ನು ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ‍ತಿಳಿಸಿವೆ.

‘ಜಿಂದಾಲ್‌ಗೆ ಭೂಮಿ ಮಾರಾಟದಲ್ಲಿ ಸಂಶಯಕ್ಕೆ ಆಸ್ಪದವಿಲ್ಲ. ಹಗರಣವೂ ನಡೆದಿಲ್ಲ. ಎಲ್ಲವೂ ಕಾನೂನು ಪ್ರಕಾರವೇ ನಡೆದಿದೆ’ ಎಂದು ಜಾರ್ಜ್‌ ಅವರು ದಾಖಲೆಗಳ ಸಮೇತ ಮುಖ್ಯಮಂತ್ರಿಯವರಿಗೆ ವಿವರಿಸಿದರು.

ಜಮೀನು ಮಾರಾಟಕ್ಕೆ ಸಂಬಂಧಿಸಿದ ಕಡತಗಳನ್ನು ತರಿಸಿಕೊಂಡು ಸ್ವತಃ ಅಧ್ಯಯನ ನಡೆಸಲು ಮುಖ್ಯಮಂತ್ರಿಯವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ... ಜಿಂದಾಲ್‌ಗೆ ಭೂಮಿ: ಲಾಭ ಯಾರಿಗೆ?

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !